ಎಂಟು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು : ರಾಜ್ಯ ಸರ್ಕಾರವು ಎಂಟು ಮಂದಿ ಐಎಸ್‌ಎಸ್ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮನೋಜ್ ಜೈನ್ ಅವರಿಗೆ ರಾಜ್ಯ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನಾಧಿಕಾರಿಯ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ. ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ರಮಣ್‌ದೀಪ್ ಚೌಧರಿ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಪ್ರಾಧಿಕಾರದ ಮುಖ್ಯ ಮೌಲ್ಯಮಾಪನಾಧಿಕಾರಿ ಸುಷ್ಮಾ ಗೊಡ್ಬಲೆ ಅವರು ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿ, ಎಂ.ಎಸ್.ಎಂ.ಇ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ನಿರ್ದೇಶಕ ನಿತೇಶ್ ಪಾಟೀಲ್ ಅವರನ್ನು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ವರ್ಗಾವಣೆ ಮಾಡಲಾಗಿದೆ.
ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಬಸವರಾಜೇಂದ್ರ ಎಚ್. ಅವರನ್ನು ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧ್ಯಕ್ಷ, ರಾಜ್ಯ ವಿದ್ಯುತ್ ಕಾರ್ಖಾನೆ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಲೋಕಂಡೆ ಸ್ನೇಹಲ್ ಸುಧಾಕರ್ ಅವರನ್ನು ರಾಜ್ಯ ಲೋಕಸೇವಾ ಆಯೋಗದ ಜಂಟಿ ಪರೀಕ್ಷಾ ನಿಯಂತ್ರಕ ಹೆಚ್ಚುವರಿ ಹೊಣೆಗಾರಿಕೆ ವಹಿಸಲಾಗಿದೆ.
ರಾಜ್ಯ ಮಾಹಿತಿ ಆಯೋಗದ ಕಾರ್ಯದರ್ಶಿ ಬಸವರಾಜು ಎ.ಬಿ. ಅವರ ಮೂಲಸೌಕರ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿಯಾಗಿ ಹಾಗೂ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ರಂಗಪ್ಪ ಎಸ್. ಅವರನ್ನು ವಿತ್ತೀಯ ಕಾರ್ಯನೀತಿ ಸಂಸ್ಥೆ ಹೆಚ್ಚುವರಿ ನಿರ್ದೇಶಕ ವರ್ಗಾವಣೆ ಮಾಡಲಾಗಿದೆ.