Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ...

ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ‘ಕೌನ್ಸಿಲಿಂಗ್ ಮೂಲಕ ವರ್ಗಾವಣೆ’

ವಾರ್ತಾಭಾರತಿವಾರ್ತಾಭಾರತಿ15 Jun 2024 9:37 PM IST
share
ಎಂಟು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ‘ಕೌನ್ಸಿಲಿಂಗ್ ಮೂಲಕ ವರ್ಗಾವಣೆ’

ಬೆಂಗಳೂರು : ಆರೋಗ್ಯ ಇಲಾಖೆಯಯಲ್ಲಿ ಈ ಬಾರಿ ಕೌನ್ಸಿಲಿಂಗ್ ಮೂಲಕವೇ ವರ್ಗಾವಣೆ ನಡೆಯಲಿದೆ. 2016 ರ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣ ಪ್ರಮಾಣದಲ್ಲಿ ಕೌನ್ಸಿಂಗ್ ಮೂಲಕ ವರ್ಗಾವಣೆ ನಡೆಯಲಿದ್ದು, 8 ವರ್ಷಗಳಿಂದ ಕೌನ್ಸಿಲಿಂಗ್ ಎದುರು ನೋಡುತ್ತಿದ್ದ ಅರ್ಹ ವೈದ್ಯರು ಸಿಬ್ಬಂದಿಗಳಿಗೆ ನ್ಯಾಯ ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಶನಿವಾರ ಪ್ರಕಟನೆ ಹೊರಡಿಸಿರುವ ಅವರು, "ಹಿಂದಿನ ವರ್ಷ ಸರಕಾರ ರಚನೆಯಾದ ಸಂದರ್ಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ವೈದ್ಯರು ಸೇರಿದಂತೆ ವೈದ್ಯಕೀಯ ಸಿಬ್ಬಂದಿಗಳು ವರ್ಗಾವಣೆಗೆ ಬೇಡಿಕೆಯಿಟ್ಟಿದ್ದರು. ಸಾಮಾನ್ಯ ವರ್ಗವಾಣೆ ನಡೆಸಿದರೂ, ಎಲ್ಲರ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಸಾಕಷ್ಟು ವರ್ಗಾವಣೆ ಒತ್ತಡ ಪರಿಸ್ಥಿತಿಗಳನ್ನು ಎದುರಿಸಬೇಕಾಗಿ ಬಂದಿತ್ತು" ಎಂದಿದ್ದಾರೆ.

ಅಲ್ಲದೆ 2016 ರಿಂದ ಆರೋಗ್ಯ ಇಲಾಖೆಯಲ್ಲಿ ಸಮರ್ಪಕವಾದ ವರ್ಗಾವಣೆ ನಡೆದಿರಲಿಲ್ಲ. ಅಲ್ಲದೇ ಸಾಮಾನ್ಯ ವರ್ಗಾವಣೆಯಲ್ಲಿ ಅರ್ಹರಿಗೆ ನ್ಯಾಯ ದೊರೆಯುವುದಿಲ್ಲ. ಹೀಗಾಗಿ ಈ ಬಾರಿ ಪೂರ್ಣ ಪ್ರಮಾಣದ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದರು ಎಂದು ಅವರು ವಿವರಿಸಿದ್ದಾರೆ.

ಗ್ರೂಪ್ ಎ ಯಿಂದ ಹಿಡಿದು ಗ್ರೂಪ್ ಡಿ ಯಲ್ಲಿ ಬರುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ಕೌನ್ಸಿಂಗ್ ಮೂಲಕವೇ ವರ್ಗಾವಣೆ ನಡೆಸಲು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಜು.31 ರೊಳಗೆ ಕೌನ್ಸಿಲಿಂಗ್ ಪೂರ್ಣಗೊಳ್ಳಲಿದೆ. ಇಲಾಖೆಯಲ್ಲಿ ಗುರುತಿಸಿರುವ ತಜ್ಞ ಹುದ್ದೆಗಳಲ್ಲಿ ವೈದ್ಯರುಗಳು ತಜ್ಞತೆಗೆ ಅನುಗುಣವಾಗಿ ಕಾರ್ಯನಿರ್ವಹಿಸದೇ ಇತರೆ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಜ್ಞ ವೈದ್ಯರ ಮಾಹಿತಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಮೂರು ವರ್ಷ ಸೇವಾವಧಿ ಪೂರೈಸಿರುವ ವೈದ್ಯರು, ನಾಲ್ಕು ವರ್ಷ ಪೂರೈಸಿರುವ ಗ್ರೂಪ್ ಬಿ ನೌಕರರು, 5 ವರ್ಷ ಪೂರೈಸಿದ ಗ್ರೂಪ್ ಸಿ ನೌಕರರು ಹಾಗೂ 7 ವರ್ಷ ಸೇವಾವಧಿ ಪೂರೈಸಿರುವ ಗ್ರೂಪ್ ಡಿ ನೌಕರರು ಜೂನ್ ತಿಂಗಳ ಅಂತ್ಯದೊಳಗೆ ಮಾಹಿತಿ ಸಲ್ಲಿಸುವಂತೆ ತಿಳಿಸಲಾಗಿದೆ. ಸೇವಾವಧಿ ಪೂರೈಸಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸ್ಥಾನಗಳಿಗೆ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X