ಮೊಣಕಾಲು ನೋವಿಗೆ ಚಿಕಿತ್ಸೆ: ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
ಬಸವರಾಜ ಬೊಮ್ಮಾಯಿ (Photo source: PTI)
ಬೆಂಗಳೂರು, ಅ.17: ಮೊಣಕಾಲು ನೋವಿನ ಚಿಕಿತ್ಸೆಗಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಮೊಣಕಾಲಿನ ಶಸ್ತ್ರ ಚಿಕಿತ್ಸೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.
"ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿ, ಆತ್ಮೀಯರೂ ಆದ ಬಸವರಾಜ ಬೊಮ್ಮಾಯಿ ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
Next Story