ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ರಾಜ್ಯ ಸರಕಾರವು ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬೊಮ್ಮನಹಳ್ಳಿ ವಲಯದ ವಲಯ ಆಯುಕ್ತರಾಗಿದ್ದ ಎಸ್.ರಮ್ಯಾ ಅವರನ್ನು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ.
ಎಲೆಕ್ಟ್ರಾನಿಕ್ಸ್, ಐಟಿ, ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕ(ತಾಂತ್ರಿಕ) ಎ.ಬಿ.ಬಸವರಾಜು ಅವರನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಪ ಆಯುಕ್ತ(ಭೂ ಸ್ವಾಧೀನ)ರನ್ನಾಗಿ ವರ್ಗಾವಣೆ ಮಾಡಲಾಗಿದೆ.
Next Story