ಮೈಸೂರು- ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನಗಳಿಗೆ ನಿರ್ಬಂಧ: ಪ್ರತಾಪ್ ಸಿಂಹ
ಮೈಸೂರು, ಜೂ.29: ಮೈಸೂರು- ಬೆಂಗಳೂರು ನಡುವಿನ ಎಕ್ಸ್ಪ್ರೆಸ್ ಹೈವೇಯಲ್ಲಿ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕು ಸಾಗಣೆ ವಾಹನಗಳನ್ನು ಹೆದ್ದಾರಿ ಎಡಭಾಗದಲ್ಲಿ ಚಲಿಸುವಂತೆ ಕ್ರಮ ವಹಿಸಲಾಗುವುದು.
ಅಲ್ಲದೆ, ಚಾಲಕರ ಬೇಜವಾಬ್ದಾರಿ ಹಾಗೂ ಅಜಾಗರೂಕತೆಯ ಚಾಲನೆಯಿಂದ ಈ ಅಪಘಾತಗಳಿಗೆ ಕಾರಣವಾಗಿದ್ದು, ಈ ಹೈವೇಯಲ್ಲಿ ಇನ್ಮುಂದೆ ದ್ವಿಚಕ್ರ ವಾಹನ ಹಾಗೂ ತ್ರಿಚಕ್ರ ವಾಹನಗಳ ಚಾಲನೆಗೆ ಅವಕಾಶ ಇರುವುದಿಲ್ಲ. ಇವುಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.
ಇದರ ಜೊತೆಗೆ ಎಕ್ಸ್ಪ್ರೆಸ್ ಹೈವೇಯ ಎಡಭಾಗದಲ್ಲಿ ಸರಕು ಸಾಗಣೆ ವಾಹನಗಳು ಚಲಿಸುವಂತೆ ಕ್ರಮ ವಹಿಸಲಾಗುವುದು ಎಂದರು.
Next Story