ಬಿಎಂಟಿಸಿ ಬಸ್ಗೆ ದ್ವಿಚಕ್ರ ವಾಹನ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
ಸಾಂದರ್ಭಿಕ ಚಿತ್ರ
ಬೆಂಗಳೂರು, ಅ.5: ಓವರ್ ಟೇಕ್ ಮಾಡುವ ಭರದಲ್ಲಿ ಬಿಎಂಟಿಸಿ ಬಸ್ಗೆ ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಸವಾರನ ಮೇಲೆ ಬಸ್ ಹರಿದಿದ್ದು, ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಯಲಹಂಕದ ಮದರ್ ಡೈರಿ ಬಳಿ ವರದಿಯಾಗಿದೆ.
ಮತ್ತಿಕೆರೆ ನಿವಾಸಿ ಭರತ್ ರೆಡ್ಡಿ(24) ಮೃತಪಟ್ಟವರು, ಈತ ಸಿವಿಲ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸೆ.4ರ ರಾತ್ರಿ ಯಲಹಂಕದ ಮದರ್ ಡೈರಿ ಬಳಿ ತೆರಳುತ್ತಿದ್ದರು. ರಸ್ತೆಯಲ್ಲಿ ಹೋಗುತ್ತಿದ್ದ ಬಿಎಂಟಿಸಿ ಬಸ್ ಅನ್ನು ಓವರ್ ಟೇಕ್ ಮಾಡಲು ಭರತ್ರೆಡ್ಡಿ ಮುಂದಾಗಿದ್ದಾರೆ. ಈ ವೇಳೆ, ಬಸ್ಗೆ ಅವರ ದ್ವಿಚಕ್ರ ವಾಹನ ಢಿಕ್ಕಿ ಹೊಡೆದಿದೆ. ನಿಯಂತ್ರಣ ತಪ್ಪಿ ಭರತ್ ಕೆಳಗೆ ಬಿದ್ದಿದ್ದು, ಕ್ಷಣಾರ್ಧದಲ್ಲಿ ಅವರ ಮೇಲೆ ಬಸ್ ಹರಿದಿದೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ ತೀವ್ರ ರಕ್ತಸ್ರಾವವಾಗಿ ಭರತ್ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಯಲಹಂಕ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಿಎಂಟಿಸಿ ಚಾಲಕ ಪರಾರಿಯಾಗಿದ್ದಾನೆ. ಈ ಸಂಬಂಧ ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.