ದಾವಣಗೆರೆ ನೂತನ ಎಸ್ಪಿಯಾಗಿ ಉಮಾ ಪ್ರಶಾಂತ್

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ.
ಈವರೆಗೆ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ದಾವಣಗೆರೆ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಮುಂದಿನ ಆದೇಶದವರೆಗೆ ಅಸ್ತಿತ್ವದಲ್ಲಿರುವ ಖಾಲಿ ಹುದ್ದೆಯಲ್ಲಿ ದಾವಣಗೆರೆ ಪೊಲೀಸ್ ಅಧೀಕ್ಷಕರಾಗಿ ನಿಯೋಜಿಸಲಾಗಿದೆ ಎಂದು ಸರ್ಕಾರದ ಅಧಿಸೂಚನೆ ತಿಳಿಸಿದೆ.
Next Story