ಏಕರೂಪ ನಾಗರಿಕ ಸಂಹಿತೆ ಕೇವಲ ಚುನಾವಣಾ ಗಿಮಿಕ್: ಎಚ್.ವಿಶ್ವನಾಥ್
ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡುತ್ತೇವೆ ಎಂದು ಹೇಳುತ್ತಿರುವುದು ಲೋಕಸಭಾ ಚುನಾವಣಾ ಗಿಮಿಕ್ ಅಷ್ಟೇ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಬೇಕು ಎನ್ನುವುದು ಹಿಂದಿನಿಂದಲೂ ಚರ್ಚೆಯಾಗುತ್ತಿದೆ. ಅಷ್ಟು ಸುಲಭವಾಗಿ ಏಕರೂಪ ನಾಗರಿಕ ಸಂಹಿತೆ ಜಾರಿಮಾಡಲು ಸಾಧ್ಯವಿಲ್ಲ ಎಂದರು.
ಭಾರತ ಗಣತಂತ್ರ ವ್ಯವಸ್ಥೆಯನ್ನು ಹೊಂದಿರುವ ರಾಷ್ಟ್ರ. ಎಲ್ಲಾ ರಾಜ್ಯಗಳು ಇದಕ್ಕೆ ಒಪ್ಪಿಗೆ ಸೂಚಿಸಬೇಕು. ಭಾರತ ಏಕತೆಯಲ್ಲಿ ವೈವಿಧ್ಯತೆಯನ್ನು ಹೊಂದಿದೆ ಹೊರತು ವೈವಿಧ್ಯತೆಯಿಂದ ಏಕತೆ ಹೊಂದಿಲ್ಲ ಎಂದು ತಿರುಗೇಟು ನೀಡಿದರು.
Next Story