ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಪ್ರಕರಣ | ಮಾಜಿ ಸಚಿವ ಬಿ.ನಾಗೇಂದ್ರಗೆ ನೋಟಿಸ್ ಜಾರಿ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಪರಿಶಿಷ್ಠ ವರ್ಗಗಳ ಕಲಾಣ್ಯ ಇಲಾಖೆಯ ಮಾಜಿ ಸಚಿವ ಬಿ.ನಾಗೇಂದ್ರಗೆ ಜುಲೈ 9ರಂದು ವಿಚಾರಣೆಗೆ ಹಾಜರಾಗುವಂತೆ ಎಸ್‍ಐಟಿ ನೊಟೀಸ್ ಜಾರಿ ಮಾಡಿದೆ.
ಮಾಜಿ ಸಚಿವ ಬಿ.ನಾಗೇಂದ್ರ ಜೊತೆ ವಾಲ್ಮೀಕಿ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್ ಅವರಿಗೂ ನೊಟೀಸ್ ಜಾರಿ ಮಾಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ 94.73 ಕೋಟಿ ರೂ. ಅವ್ಯವಹಾರ ಆರೋಪ ಸಂಬಂಧ ಇದುವರೆಗೂ 11 ಮಂದಿಯನ್ನು ಬಂಧಿಸಿ 30 ಕೋಟಿ ರೂ. ಅಧಿಕ ಹಣ ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ಆರಂಭದಲ್ಲಿ 18 ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗಿದೆ ಎಂಬುದು ತಿಳಿದುಬಂದಿತ್ತು.
Next Story