ವಾಲ್ಮೀಕಿ ನಿಗಮ ಹಗರಣ: ಬಿ.ನಾಗೇಂದ್ರ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರ ಅನುಮತಿ

ಬಿ.ನಾಗೇಂದ್ರ/ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್
ಬೆಂಗಳೂರು : ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಚಿವ ಬಿ.ನಾಗೇಂದ್ರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳು ಪ್ರಾಸಿಕ್ಯೂಷನ್ಗೆ ಕಳೆದ ಒಂದು ತಿಂಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಈ ಸಂಬಂಧ ಈಡಿ ಅಧಿಕಾರಿಗಳು ಮತ್ತೆ ಬಿ.ನಾಗೇಂದ್ರ ಅವರನ್ನು ವಿಚಾರಣೆಗೊಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ 94 ಕೋಟಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಶಾಸಕ ಬಿ.ನಾಗೇಂದ್ರ ಅವರನ್ನು 2024ರ ಜುಲೈ 12 ರಂದು ಜಾರಿ ನಿರ್ದೇಶಾನಾಲಯ ಅಧಿಕಾರಿಗಳು ಬಂಧಿಸಿದ್ದರು. ಬಳಿಕ ಶಾಸಕ ನಾಗೇಂದ್ರಗೆ ಷರತ್ತುಬದ್ಧ ಜಾಮೀನು ಮಂಜೂರು ಆಗಿದ್ದರಿಂದ ಅ.15ರಂದು ಬಿಡುಗಡೆಯಾಗಿದ್ದರು.