ಹಿರಿಯ ನಟ ಬ್ಯಾಂಕ್ ಜನಾರ್ದನ್ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು
ಬೆಂಗಳೂರು: ಕನ್ನಡ ಸಿನೆಮಾ ರಂಗದ ಹೆಸರಾಂತ ಪೋಷಕ ನಟ ಬ್ಯಾಂಕ್ ಜನಾರ್ದನ್ ಅವರಿಗೆ ನಿನ್ನೆ (ಸೋಮವಾರ) ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಜನಾರ್ದನ್ ಅವರಿಗೆ 74 ವರ್ಷ ವಯಸ್ಸಾಗಿದೆ. ನಿನ್ನೆ ಸಂಜೆ ಅವರಿಗೆ ಹೃದಯಾಘಾತ ಸಂಭವಿದ್ದು. ಸದ್ಯ ಅವರಿಗೆ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗ್ತಿದೆ ಎಂದು ತಿಳದು ಬಂದಿದೆ.
ಬ್ಯಾಂಕ್ ಜನಾರ್ದನ್ ರಂಗಭೂಮಿ ಕಲಾವಿದರಾಗಿ ಹೆಸರು ಮಾಡಿದ್ದರು. ಬಳಿಕ ಹಲವು ಕನ್ನಡ ಚಲನಚಿತ್ರಗಳು ಮತ್ತು ಟಿವಿ ಸೀರಿಯಲ್ನಲ್ಲಿ ಹಾಸ್ಯ ನಟನಾಗಿ ನಟಿಸಿ ಜನಪ್ರಿಯರಾಗಿದ್ದಾರೆ.
Next Story