ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಜು.12ರಂದು ಉಪ ಚುನಾವಣೆ: ಅಧಿಸೂಚನೆ ಪ್ರಕಟ
ಫೈಲ್ ಫೋಟೋ
ಬೆಂಗಳೂರು, ಜೂ.25: ಜಗದೀಶ್ ಶೆಟ್ಟರ್ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಭಾರತದ ಚುನಾವಣಾ ಆಯೋಗ ಇಂದು ಅಧಿಸೂಚನೆ ಪ್ರಕಟಿಸಿದೆ.
ಜುಲೈ 12ರಂದು ಚುನಾವಣೆ ನಡೆಯಲಿದ್ದು, ಇಂದಿನಿಂದ (ಜೂ.25) ಜು.2ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜು.3ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಜು.5 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ಜು.12ರಂದು ಬೆಳಗ್ಗೆ 9ರಿಂದ ಸಂಜೆ 4ರವರೆಗೆ ಮತದಾನ ನಡೆಯಲಿದೆ. ಅಂದೇ ಸಂಜೆ 5ರಿಂದ ಮತ ಎಣಿಕೆ ನಡೆಯಲಿದೆ ಎಂದು ಕರ್ನಾಟಕ ವಿಧಾನ ಪರಿಷತ್ ಉಪ ಚುನಾವಣೆಯ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story