ವಿಜಯಪುರ | ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ; ಇಬ್ಬರು ಮಕ್ಕಳು ಮೃತ್ಯು
ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ತಂದೆಯೊಬ್ಬ ವಿಷಪ್ರಾಶನ ಮಾಡಿದ ಘಟನೆ ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ನಡೆದಿದ್ದು, ಈ ಘಟನೆಯಿಂದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.
ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ಬಾಲಕರು ಎಂದು ತಿಳಿದು ಬಂದಿದೆ.
ಮೃತ ಬಾಲಕರ ತಂದೆಯನ್ನು ಭೀರಣ್ಣ ಎಂದು ಗುರುತಿಸಲಾಗಿದ್ದು, ತನ್ನ ಮೂವರು ಮಕ್ಕಳಿಗೆ ವಿಷಪ್ರಾಷನ ಮಾಡಿ ತಾನು ಸಹ ವಿಷ ಸೇವನೆ ಮಾಡಿದ್ದಾರೆ, ಘಟನೆಯಿಂದಾಗಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಬೀರಣ್ಣ ಹಾಗೂ ಇನ್ನೋರ್ವ ಪುತ್ರ ಸಂಗಮೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆನ್ನಲಾಗಿದೆ.
ತನ್ನ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ಮನನೊಂದ ಭೀರಣ್ಣ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಪ್ರಗತಿಯಲ್ಲಿದೆ.
Next Story