Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರದಲ್ಲೇ ವಿಜಯಪುರ ಪಾಲಿಕೆಯ ಮೇಯರ್...

ಶೀಘ್ರದಲ್ಲೇ ವಿಜಯಪುರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ; 7 ಸದಸ್ಯರು ಕಾಂಗ್ರೆಸ್ ತೆಕ್ಕೆಗೆ

ವಾರ್ತಾಭಾರತಿವಾರ್ತಾಭಾರತಿ11 Oct 2023 4:17 PM IST
share
ಶೀಘ್ರದಲ್ಲೇ ವಿಜಯಪುರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ; 7 ಸದಸ್ಯರು ಕಾಂಗ್ರೆಸ್ ತೆಕ್ಕೆಗೆ

ಬೆಂಗಳೂರು: ವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಅವರ ಬೆಂಗಳೂರಿನ ನಿವಾಸದಲ್ಲಿ ಬುಧವಾರ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಮಹಾನಗರ ಪಾಲಿಕೆಯ ಪಕ್ಷೇತರ ಸದಸ್ಯರಾದ ಅಶೋಕ ನ್ಯಾಮಗೌಡ, ವಿಮಲಾ ರಫೀಕ್ ಕಾನೆ, ಅಲ್ತಾಫ್ ಇಟಗಿ, ಜೆಡಿಎಸ್ ಸದಸ್ಯೆ ಸುಮಿತ್ರಾ ರಾಜು ಜಾದವ, ಎಂಐಎಂಐಎಂ ನ ಕೈಸರ್ ಇನಾಮದಾರ ಮತ್ತು ಸೂಫಿಯಾ ವಾಟಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಪಾಲಿಕೆಯ ಮತ್ತೋರ್ವ ಸದಸ್ಯೆ ಕೂಡ ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದಾರೆ. ಆದರೆ, ಅವರು ಕಾರಣಾಂತರಗಳಿಂದ ಬಂದಿರಲಿಲ್ಲ.

ಒಟ್ಟು 35 ಸದಸ್ಯರನ್ನು ಹೊಂದಿರುವ ಪಾಲಿಕೆಯಲ್ಲಿ 10 ಜನ ಕಾಂಗ್ರೆಸ್ ಸದಸ್ಯರಿದ್ದಾರೆ. ಈ ಸೇರ್ಪಡೆಯೊಂದಿಗೆ ಈಗ ಕಾಂಗ್ರೆಸ್ ಕಾರ್ಪೋರೇಟರ್ ಗಳ ಸಂಖ್ಯೆ 18ಕ್ಕೇರಿದೆ. ಅಲ್ಲದೇ, ತಲಾ ಇಬ್ಬರು ಶಾಸಕರು ಹಾಗೂ ವಿಧಾನ ಪರಿಷತ ಸದಸ್ಯರು ಸೇರಿದಂತೆ ಕಾಂಗ್ರೆಸ್ ಸದಸ್ಯರ ಒಟ್ಟು ಸಂಖ್ಯೆ 22ಕ್ಕೆೇ ಏರಿದಂತಾಗಿದೆ. ಇದರಿಂದಾಗಿ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದಂತಾಗಿದೆ. ಇದರಿಂದಾಗಿ ಸದ್ಯದಲ್ಲೇ ಮೇಯರ್ ಮತ್ತು ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ಸಿನ ಗೆಲುವು ನಿಚ್ಚಳವಾಗಿದೆ.

ಸಚಿವ ಎಂ. ಬಿ. ಪಾಟೀಲ ಅವರು ಕಳೆದ ಎರಡು ವಾರಗಳಿಂದ ಅಮೆರಿಕದಲ್ಲಿ ಅಧಿಕೃತ ಪ್ರವಾಸದಲ್ಲಿದ್ದರು. ಅವರು ಬುಧವಾರ ಬೆಂಗಳೂರಿಗೆ ಮರಳುತ್ತಿದ್ದಂತೆಯೇ ಈ ವಿದ್ಯಮಾನ ನಡೆದಿದೆ. ಸ್ವತಃ ಎಂ. ಬಿ. ಪಾಟೀಲ ಮತ್ತು ಅವರ ಸಹೋದರ ಹಾಗೂ ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಅವರು ಈ ಸದಸ್ಯರನ್ನು ಶಾಲು ಹಾಕಿ, ಕಾಂಗ್ರೆಸ್ ಪಕ್ಷಕ್ಕೆ ಸ್ವಾಗತಿಸಿದರು.

ಸದಸ್ಯರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡ ಬಳಿಕ ಮಾತನಾಡಿದ ಸಚಿವ ಎಂ. ಬಿ. ಪಾಟೀಲ್, ಕಾಂಗ್ರೆಸ್ ಮಾತ್ರ ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವ ಸಾಮರ್ಥ್ಯ ಹೊಂದಿದೆ ಎನ್ನುವುದು ಎಲ್ಲರಿಗೂ ಮನವರಿಕೆಯಾಗಿದೆ. ಹೀಗಾಗಿ ಪಕ್ಷೇತರರು ಮತ್ತು ಇನ್ನುಳಿದ ಪಕ್ಷಗಳ ಸದಸ್ಯರು ತಾವಾಗಿಯೇ ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಇವರನ್ನೆಲ್ಲ ನಾನು ಸ್ವಾಗತಿಸುತ್ತೇನೆ. ಮುಂಬರುವ ದಿನಗಳಲ್ಲಿ ವಿಜಯಪುರ ನಗರಕ್ಕೆ ನಮ್ಮಿಂದ ಸಮರ್ಥ ಆಡಳಿತ ಸಿಗಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ʼʼಕಾಂಗ್ರೆಸ್ಸಿನ ಗೆಲುವು ಖಚಿತʼʼ

ʼʼವಿಜಯಪುರ ಮಹಾನಗರ ಪಾಲಿಕೆಯ 7 ಸದಸ್ಯರು ಬೆಂಗಳೂರಿನ ನಮ್ಮ ನಿವಾಸದಲ್ಲಿ ಇಂದು ಕಾಂಗ್ರೆಸ್ಸಿಗೆ ಸೇರ್ಪಡೆಯಾದರು. ಇನ್ನೋರ್ವ ಸದಸ್ಯರು ಕೂಡ ನಮ್ಮ ಪಕ್ಷ ಸೇರಲು ತೀರ್ಮಾನಿಸಿದ್ದು, ಕಾರಣಾಂತರಗಳಿಂದ ಅವರು ಬಂದಿರಲಿಲ್ಲ. ಇದರೊಂದಿಗೆ, 35 ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ಸಿನ ಬಲ 18ಕ್ಕೆ ಏರಿದಂತಾಗಿದೆ. ಜತೆಗೆ ಸ್ಥಳೀಯ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಸೇರಿ ಪಕ್ಷದ ಬಲ 22ಕ್ಕೇರಲಿದೆ. ಸದ್ಯದಲ್ಲೇ ನಡೆಯಲಿರುವ ಮೇಯರ್ ಸ್ಥಾನದ ಚುನಾವಣೆಯಲ್ಲಿ, ಕಾಂಗ್ರೆಸ್ಸಿನ ಗೆಲುವು ನಿಚ್ಚಳವಾಗಿದೆʼʼ ಎಂದು ಸಚಿವ ಎಂ.ಬಿ ಪಾಟೀಲ್‌ ಅವರು ಟ್ವಟರ್‌ ನಲ್ಲಿ ಪೋಸ್ಟರ್‌ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X