Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ...

ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಿಂದ ನಿರಾಸೆ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ23 Nov 2024 3:06 PM IST
share
ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶದಿಂದ ನಿರಾಸೆ : ವಿಜಯೇಂದ್ರ

ಬೆಂಗಳೂರು : ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಈ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, 3 ಕ್ಷೇತ್ರಗಳಲ್ಲೂ ನಮಗೆ ಹಿನ್ನಡೆ ಆಗಿದೆ. ಚನ್ನಪಟ್ಟಣದಲ್ಲಿ ನಮ್ಮ ಮಿತ್ರ ಪಕ್ಷ ಜೆಡಿಎಸ್ , ಶಿಗ್ಗಾಂವಿ ಹಾಗೂ ಸಂಡೂರಿನಲ್ಲಿ ಬಿಜೆಪಿ ಗೆಲ್ಲಲಿದೆ ಎಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ಆದರೆ, ನಮಗೆ ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿನ್ನಡೆಯ ಕಾರಣ ಏನು? ಯಾತಕ್ಕೋಸ್ಕರ ನಮಗೆ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ ಎಂಬ ಬಗ್ಗೆ ಎರಡೂ ಪಕ್ಷಗಳ ಮುಖಂಡರು ಕುಳಿತು ಚರ್ಚೆ ಮಾಡಲಿದ್ದೇವೆ. ತಪ್ಪನ್ನು ಸರಿಪಡಿಸುವ ಕೆಲಸವನ್ನು ಮುಂದಿನ ದಿನಗಳಲ್ಲಿ ಪ್ರಾಮಾಣಿಕವಾಗಿ ಮಾಡುತ್ತೇವೆ ಎಂದು ತಿಳಿಸಿದರು.

ನಮಗೆ ಈಗ ಕೇವಲ ಫಲಿತಾಂಶ ಸಿಕ್ಕಿದೆ. ಮೊದಲ ಬಾರಿ ಸಂಡೂರು ಕ್ಷೇತ್ರದಲ್ಲಿ ಬಿಜೆಪಿ ಸುಮಾರು 80 ಸಾವಿರ ಮತಗಳನ್ನು ಪಡೆದಿದೆ. ನಾವು ಇಲ್ಲಿ ಎಂಟ್ಹತ್ತು ಸಾವಿರ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ನಮಗಿತ್ತು. ಆ ರೀತಿಯ ಎಲ್ಲ ಶ್ರಮವನ್ನು ಹಾಕಿದ್ದೆವು ಎಂದು ಪ್ರಶ್ನೆಗೆ ಉತ್ತರಿಸಿದರು. ಅದರ ನಡುವೆ ನಮಗೆ ಗೆಲ್ಲಲು ಸಾಧ್ಯವಾಗಿಲ್ಲ. ಸಂಡೂರಿನ ಫಲಿತಾಂಶವನ್ನು ಹಿನ್ನಡೆ ಎಂದು ನಾವು ಭಾವಿಸುವುದಿಲ್ಲ. ಉತ್ತಮ ಮತಗಳನ್ನು ನಾವು ಪಡೆದಿದ್ದೇವೆ. ಮುಂದಿನ ದಿನಗಳಲ್ಲಿ ನಾವೆಲ್ಲರೂ ಕುಳಿತು ಹಿನ್ನಡೆಗೆ ಕಾರಣಗಳೇನು ಎಂದು ಚರ್ಚಿಸುತ್ತೇವೆ ಎಂದು ನುಡಿದರು.

ಶಿಗ್ಗಾಂವಿ ಫಲಿತಾಂಶ ಆಘಾತ ತಂದಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪುತ್ರ ಅಲ್ಲಿ ಬಿಜೆಪಿ ಸ್ಪರ್ಧಿಯಾಗಿದ್ದರು. ಬಿಜೆಪಿಯ ಎಲ್ಲ ಕಾರ್ಯಕರ್ತರು ಅಲ್ಲಿ ಹಗಲು- ರಾತ್ರಿ ಶ್ರಮವನ್ನು ಹಾಕಿದ್ದರು. ಬೊಮ್ಮಾಯಿಯವರು ಅಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಜನರು ಇವತ್ತು ಆಡಳಿತಪಕ್ಷದ ಕಡೆ ವಾಲಿದ್ದಾರೆ. ಇದೆಲ್ಲವನ್ನೂ ನಾವು ಹಿರಿಯರು ಕುಳಿತು ಸೋಲಿನ ವಿಮರ್ಶೆ ಮಾಡುತ್ತೇವೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಎನ್‍ಡಿಎ ನಮ್ಮ ನಿರೀಕ್ಷೆಗೂ ಮೀರಿ 200 ಸೀಟುಗಳ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಎನ್‍ಡಿಎ ಹೊಸ ಇತಿಹಾಸವನ್ನು ಸೃಷ್ಟಿಸಿವೆ. ಮಹಾರಾಷ್ಟ್ರದ ಮಹಾಜನತೆ ಮತ್ತೊಮ್ಮೆ ನರೇಂದ್ರ ಮೋದಿಯವರ ನಾಯಕತ್ವದ ಬಗ್ಗೆ ವಿಶ್ವಾಸ ಇಟ್ಟು ಒಂದು ಐತಿಹಾಸಿಕ ಗೆಲುವು ನೀಡಿದ್ದು ತುಂಬ ಸಂತಸ ತಂದಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X