ಹೈಕೋರ್ಟ್ ಆದೇಶ ಉಲ್ಲಂಘನೆ : ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ಸೇರಿ 44 ಮಂದಿ ವಿರುದ್ಧ ಎಫ್ಐಆರ್
ಬೆಂಗಳೂರು: ಪ್ರತಿಭಟನೆ ಸಂಬಂಧ ಹೈಕೋರ್ಟ್ ನೀಡಿದ್ದ ಆದೇಶ ಉಲ್ಲಂಘನೆ ಮಾಡಿರುವ ಆರೋಪದಡಿ ಸಂಸದರಾದ ಪಿ.ಸಿ.ಮೋಹನ್, ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ, ಶಾಸಕ ರಾಮಮೂರ್ತಿ ಸೇರಿ 44 ಜನರ ವಿರುದ್ಧ ಇಲ್ಲಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಹೈಕೋರ್ಟ್ ಆದೇಶದಂತೆ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುವಂತಿಲ್ಲ. ಆದರೂ ಸಹ ಮುಖೇಶ್ ಹಲ್ಲೆ ನೆಪದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ಸಂಬಂಧ ಠಾಣಾಧಿಕಾರಿ ದೂರು ಆಧರಿಸಿ ಐಪಿಸಿ ಸೆಕ್ಷನ್ 143, 149, 188, 283, 290, 268ರಡಿ ಎಫ್ಐಆರ್ ದಾಖಲಿಸಲಾಗಿದೆ.
ಅಲ್ಲದೆ, ಚುನಾವಣೆ ನೀತಿ ಸಂಹಿತೆಯಿಂದಾಗಿ, ಪ್ರತಿಭಟನೆಗೆ ಅವಕಾಶ ಇಲ್ಲ. ಹೀಗಾಗಿ ಮುಖೇಶ್ ಸೇರಿದಂತೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆಯಲು ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಹ ಆಗಮಿಸಿದ್ದರು. ಜತೆಗೆ, ತಮಿಳುನಾಡು ಕುರಿತು ನೀಡಿದ್ದ ಹೇಳಿಕೆ ವಿವಾದ ಸ್ವರೂಪ ಪಡೆದುಕೊಂಡಿತ್ತು.
Next Story