ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ಸಿಎಂ ಅನುಮೋದನೆ: ಸಚಿವ ಮಧು ಬಂಗಾರಪ್ಪ
ಸಾಂದರ್ಭಿಕ ಚಿತ್ರ
ಬೆಂಗಳೂರು: 'ಶಾಲೆಗಳಲ್ಲಿ ವಾರಕ್ಕೆ 2 ಮೊಟ್ಟೆ ನೀಡಲು ನಿರ್ಧರಿಸಲಾಗಿದೆ' ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ''ವಾರಕ್ಕೆ 2 ಮೊಟ್ಟೆ ಕೊಡುವ ಬಗ್ಗೆ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಂಡಿದ್ದೆ. ಅದರಂತೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿ ವಾರಕ್ಕೆ 2 ಮೊಟ್ಟೆ ನೀಡಲು ಅನುಮೋದಿಸಿದ್ದಾರೆ'' ಎಂದು ತಿಳಿಸಿದರು.
''ಮೊಟ್ಟೆ ವಿತರಣೆ ಹಾಗೂ ಶೂ- ಸಾಕ್ಸ್ ವಿಚಾರದಕಲ್ಲಿ ಎಸ್ಡಿಎಮ್ಸಿ ಅವರಿಗೆ ಎಲ್ಲ ಅಧಿಕಾರ ಕೊಡಲಾಗಿದೆ. 280 ಕೋಟಿ ರೂ. ಈ ಮೊಟ್ಟೆ ನೀಡಲು ಸದ್ಯ ಯೋಜನೆ ರೂಪಿಸಲಾಗಿದೆ. ವಾರ್ಷಿಕವಾಗಿ 84 ದಿನ ಮಕ್ಕಳಿಗೆ ಮೊಟ್ಟೆ ಕೊಡಲಾಗುತ್ತದೆ. ಮೊಟ್ಟೆ ತಿನ್ನದೇ ಇರುವವರಿಗೆ ಚಿಕ್ಕಿ ಮತ್ತು ಬಾಳೆ ಹಣ್ಣು ಕೊಡುವ ವ್ಯವಸ್ಥೆ ಮಾಡಲಾಗಿದೆ. ಗುಣಮಟ್ಟ ಚೆನ್ನಾಗಿಲ್ಲ ಎಂದರೆ ಎಸ್ಡಿಎಮ್ಸಿ ಅವರೇ ಜವಾಬ್ದಾರಿ'' ಎಂದು ತಿಳಿಸಿದರು.
Next Story