"ಯಾವ ಸುದ್ದಿಗೆ ಈ ಪರಿ ಬೊಮ್ಮಾಯಿ ಬೆದರುತ್ತಿರುವುದು?": ಕೋರ್ಟಿನಿಂದ ತಡೆಯಾಜ್ಞೆ ತರಲು ಕೆ. ಸುಧಾಕರ್ ಕಾರಣವೇ ಎಂದು ಪ್ರಶ್ನಿಸಿದ ಕಾಂಗ್ರೆಸ್
PC: fb.com
ಬೆಂಗಳೂರು: ತಮ್ಮ ವಿರುದ್ಧ ಯಾವುದೇ ರೀತಿಯ ಮಾನಹಾನಿಕರ ಹೇಳಿಕೆ, ಸುದ್ದಿ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿರುವ ಬಗ್ಗೆ ರಾಜ್ಯ ಕಾಂಗ್ರೆಸ್ ಪ್ರತಿಕ್ರಿಯಿಸಿದೆ.
ನಗರದ ಸಿಟಿ ಸಿವಿಲ್ ಕೋರ್ಟ್ನಲ್ಲಿ ಸಂಸದ ಬಸವರಾಜ್ ಬೊಮ್ಮಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಾಣಿ.ಎ. ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವು ಯಾವುದೇ ಮಾನಹಾನಿಕರ ಸುದ್ದಿ ಪ್ರಸಾರ ಮಾಡದಂತೆ ತಡೆ ನೀಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೋರ್ಟಿನಿಂದ ತಡೆಯಾಜ್ಞೆ ತರುವುದಕ್ಕೆ ಕಾರಣ ಏನು? ಯಾರು ಕಾರಣ? ಈ ತಡೆಯಾಜ್ಞೆಗೆ ಕೆ. ಸುಧಾಕರ್ ಕಾರಣವೇ ಅಥವಾ ಸ್ಯಾಂಟ್ರೋ ರವಿ ಕಾರಣವೇ? ಯಾವ ಸುದ್ದಿಗೆ ಬೊಮ್ಮಾಯಿಯವರು ಈ ಪರಿ ಬೆದರುತ್ತಿರುವುದು? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.
Next Story