ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ
ಬೆಂಗಳೂರು, ಆ. 19: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಈ ಸಂಬಂಧ ಟ್ವೀಟ್ ಮಾಡಿರುವ ‘ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ’, ‘ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ’ ಎಂದು ತಿಳಿಸಿದೆ.
‘ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಅಲ್ಲಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48ಗಂಟೆಗಳಲ್ಲಿ ಒಳನಾಡಿನಲ್ಲಿ ಬಿರುಗಾಳಿಯ ವೇಗವು ಗಂಟೆಗೆ 30ರಿಂದ 40 ಕಿ.ಮೀ ಇರುವ ಸಾಧ್ಯತೆಗಳಿವೆ’ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Next Story