ಯಾದಗಿರಿ: ಮೃತದೇಹ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿ
ಯಾದಗಿರಿ: ಬೆಂಗಳೂರಿನಿಂದ ಕಲಬುರಗಿಗೆ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ ಪಲ್ಟಿಯಾದ ಘಟನೆ ಸೈದಾಪುರ ಸಮೀಪದ ಶೆಟ್ಟಿಹಳ್ಳಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ.
ಬೆಂಗಳೂರಿನಲ್ಲಿ ಮೃತಪಟ್ಟಿದ್ದ ರಾಜು (45) ಎಂಬವರ ಮೃತದೇಹವನ್ನು ಬೆಂಗಳೂರಿನಿಂದ ಕಲಬುರ್ಗಿಗೆ ಸಾಗಿಸುತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಬಳಿಕ ಕುಟುಂಬಸ್ಥರು ಇನ್ನೊಂದು ವಾಹನದಲ್ಲಿ ಮೃತದೇಹ ಕೊಂಡೊಯ್ದಿದ್ದಾರೆ. ಸೈದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story