ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಆರಂಭವಾಗಿದ್ದು, 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಒಂದು ವಾರದ ಕಾಲ ಗುಡುಗು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 24 ಗಂಟೆಗಳಿಗೆ ಅನ್ವಯವಾಗುವಂತೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಳೆಯ ಜತೆಗೆ ಈ ಎಲ್ಲ ಜಿಲ್ಲೆಗಳಲ್ಲಿ ಗಾಳಿ, ಗುಡುಗು, ಮಿಂಚು ಕೂಡಾ ಇರಲಿದೆ. ಗಂಟೆಗೆ 30ರಿಂದ 40 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಶನಿವಾರವೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿತ್ತು.
Next Story