ರಾಜ್ಯದ 15 ಜಿಲ್ಲೆಗಳಿಗೆ ʼಯೆಲ್ಲೋ ಅಲರ್ಟ್ʼ ಘೋಷಣೆ
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಹೆಚ್ಚಾಗಿದ್ದು, ಆ.23ರಿಂದ ಮೂರು ದಿನಗಳ ಕಾಲ ರಾಜ್ಯದ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಬೆಳಗಾವಿ, ಕೋಲಾರ, ಕಲಬುರ್ಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಉಳಿದ ಜಿಲ್ಲೆಗಳಲ್ಲಿ, ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
Next Story