ಯೋಗೇಶ್ ಗೌಡ ಹತ್ಯೆ ಪ್ರಕರಣ: ವಿನಯ್ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ವಿನಯ್ ಕುಲಕರ್ಣಿ
ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಫಿ ಸಾಕ್ಷಿಯಾಗಿಸಿದ್ದನ್ನು ಪ್ರಶ್ನಿಸಿ ಶಾಸಕ, ಆರೋಪಿ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿಯನ್ನು ಮಾಫಿ ಸಾಕ್ಷಿಯಾಗಿಸಲಾಗಿದೆ. ಇದನ್ನು ಪ್ರಶ್ನಿಸಿ ಆರೋಪಿ ವಿನಯ್ ಕುಲಕರ್ಣಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಪೀಠ, ನಾಲ್ಕು ವಾರಗಳಲ್ಲಿ ಟ್ರಯಲ್ ಪೂರ್ಣಗೊಳಿಸಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸೂಚನೆ ನೀಡಿ, ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಅಲ್ಲದೆ, ಯೋಗೇಶ್ ಗೌಡ ಪತ್ನಿ ಮಲ್ಲವ್ವ ಸಲ್ಲಿಸಿದ್ದ ಅರ್ಜಿಯನ್ನೂ ವಜಾಗೊಳಿಸಲಾಗಿದೆ.
Next Story