ರಾಹುಲ್ ಗಾಂಧಿ ಸ್ವಾಗತಕ್ಕೆ ಮೈಸೂರು ವಿಮಾನ ನಿಲ್ದಾಣದ ಬಳಿ ಜಮಾಯಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರು
ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ
ಮೈಸೂರು: ಗೃಹಲಕ್ಷ್ಮಿ ಯೋಜನೆ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ವಾಗತಕ್ಕೆ ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಮೈಸೂರು ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದಾರೆ.
ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ನೇತೃತ್ವದಲ್ಲಿ ಬುಧವಾರ ಸಾವಿರಾರು ಕಾರ್ಯಕರ್ತರುಗಳು ಮಂಡಕಳ್ಳಿ ವಿಮಾನ ನಿಲ್ದಾಣದ ಗೇಟಿನ ಮುಂಭಾಗ ಕಾದು ನಿಂತಿದ್ದಾರೆ.
ರಾಹುಲ್ ಗಾಂಧಿ ವಿಮಾನ ನಿಲ್ದಾದಿಂದ ಮಹರಾಜ ಕಾಲೇಜು ಮೈದಾನಕ್ಕೆ ತೆರಳುವ ರಸ್ತೆಗಳ ಇಕ್ಕೆಲಗಳಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರುಗಳು ಸ್ವಾಗತ ಕೋರಲು ಅನುವಿ ಮಾಡಿಕೊಡುವಂತೆ ನಲಪಾಡ್ ಪೊಲೀಸರಲ್ಲಿ ಮನವಿ ಮಾಡಿದರು. ಈ ವೇಳೆ ಎಎಸ್ಪಿ ನಂದಿನ ಅವಕಾಶ ನೀಡಲು ನಿರಾಕರಿಸಿದರು. ಇದರಿಂದ ಕೆಲ ಕಾಲ ನಲಪಾಡ್ ಮತ್ತು ಪೊಲೀಸರ ನಡುವೆ ಚರ್ಚೆ ನಡೆಯಿತು.
ನಂತರ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿ ತಿಳಿಸುವುದಾಗಿ ಪೊಲೀಸರು ಹೇಳಿದರು
Next Story