Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಅಂಕಣಗಳು
  4. ಕಾಲಂ 9
  5. ಕಾಂತರಾಜು ವರದಿ: ಜಾತಿಮುಸುಕಿನ ವರ್ಗ...

ಕಾಂತರಾಜು ವರದಿ: ಜಾತಿಮುಸುಕಿನ ವರ್ಗ ಸಂಘರ್ಷ?

ಶಿವಸುಂದರ್ಶಿವಸುಂದರ್25 April 2025 10:38 AM IST
share
ಕಾಂತರಾಜು ವರದಿ: ಜಾತಿಮುಸುಕಿನ ವರ್ಗ ಸಂಘರ್ಷ?

ಭಾಗ- 3

ಅಂಬೇಡ್ಕರ್ ಸ್ಪಷ್ಟವಾಗಿ ಎಚ್ಚರಿಸಿರುವಂತೆ ಜಾತಿ ವ್ಯವಸ್ಥೆ ಮತ್ತು ಬಂಡವಾಳಶಾಹಿ ವ್ಯವಸ್ಥೆಗಳು ಆರ್ಥಿಕ ಮತ್ತು ಸಾಮಾಜಿಕ ತಾರತಮ್ಯಗಳನ್ನು ಸಾಂಸ್ಥಿಕಗೊಳಿಸುತ್ತವೆ ಮತ್ತು ನಿರಂತರಗೊಳಿಸುತ್ತವೆ. ಹೀಗಾಗಿ ಶೋಷಿತ ಸಮಾಜದ ಎಲ್ಲರಿಗೂ ಸಾಮಾಜಿಕ ನ್ಯಾಯ ದಕ್ಕಬೇಕೆಂದರೂ ಸಂಪತ್ತು, ಅವಕಾಶ, ಆದಾಯ, ಉದ್ಯೋಗಗಳಲ್ಲಿ ಸರಿಸಮಾನವಾದ ಪಾಲು ಸಿಗಬೇಕು. ಅದನ್ನು ಸಾಧಿಸುವೆಡೆಗೆ ಮೀಸಲಾತಿ ಒಂದು ಸಣ್ಣ ಸಾಧನವಷ್ಟೆ.

ಆದರೆ ಕಾರ್ಪೊರೇಟ್ ಬಂಡವಾಳಶಾಹಿ ಮತ್ತು ಬ್ರಾಹ್ಮಣಶಾಹಿ ವ್ಯವಸ್ಥೆ ಇಂದು ಈ ಸಾಧನವನ್ನು ಕೂಡ ಅಪ್ರಸ್ತುತಗೊಳಿಸುತ್ತಿದೆ. ಜಾತಿ ಜನಗಣತಿ ನಡೆದು ಯಾವ್ಯಾವ ಸಮುದಾಯಕ್ಕೆ ಸಮಾಜದ ಸಂಪತ್ತಿನಲ್ಲಿ ಎಷ್ಟೆಷ್ಟು ಪಾಲಿರಬೇಕು ಎಂದು ನಿಗದಿಯಾಗುವುದು ಅತ್ಯಂತ ಪ್ರಜಾತಾಂತ್ರಿಕವಾದ ವಿಷಯವೇ. ಆದರೆ ಸಾಮಾಜಿಕ ನ್ಯಾಯ ಕೇವಲ ವಿತರಣಾ ನ್ಯಾಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದು ಉತ್ಪಾದನಾ ನ್ಯಾಯದಲ್ಲೂ ಇದ್ದರೆ ಮಾತ್ರ ವಿತರಣಾ ನ್ಯಾಯ ಸಿಗುತ್ತದೆ.

ಅಂದರೆ ಉತ್ಪಾದನೆ ಕೆಲವರಿಗೆ ಮಾತ್ರ ಲಾಭ ಲೂಟಿಗೆ ಅವಕಾಶ ಮಾಡಿಕೊಡುವ ಬಂಡವಾಳಶಾಹಿಯಾಗಿದ್ದು ವಿತರಣೆ ಮಾತ್ರ ಸಾಮಾಜಿಕ ನ್ಯಾಯದಿಂದ ಕೂಡಿರಲು ಸಾಧ್ಯವಿಲ್ಲ.

ಉದಾಹರಣೆಗೆ ಇಂದಿನ ಆಕ್ರಮಣಕಾರಿ ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಮೀಸಲಾತಿಯೂ ಕೂಡ ಹೇಗೆ ಅಪ್ರಸ್ತುತವಾಗುತ್ತಿದೆ ಎನ್ನುವುದನ್ನು ಅರ್ಥಮಾಡಿಕೊಳ್ಳದಿದ್ದರೆ ಸಾಮಾಜಿಕ ನ್ಯಾಯದ ರಾಜಕಾರಣಕ್ಕೆ ಇರುವ ಸವಾಲುಗಳು ಅರ್ಥವಾಗದೆ ಸಾಮಾಜಿಕ ನ್ಯಾಯದ ರಾಜಕಾರಣವೂ ಬ್ರಾಹ್ಮಣಶಾಹಿ ರಾಜಕಾರಣಕ್ಕೆ ಬಲಿಯಾಗುತ್ತದೆ.

ಮೀಸಲಾತಿ- ಇತಿ ಮತ್ತು ಮಿತಿ

ಇತ್ತೀಚೆಗೆ ಸರಕಾರದಲ್ಲಿನ 3,000 ಜವಾನ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿತ್ತು. ಅದಕ್ಕೆ 30 ಲಕ್ಷ ಅರ್ಜಿಗಳು ಬಂದಿದ್ದವಂತೆ. ಅದರಲ್ಲಿ 2.5 ಲಕ್ಷ ಡಾಕ್ಟರೇಟ್ ಪದವೀಧರರು ಇದ್ದರಂತೆ.

ಈಗ ಸಾವಿರ ಹುದ್ದೆಗಳಲ್ಲಿ 150 ಹುದ್ದೆಗಳು ಮೀಸಲಾತಿಯಲ್ಲಿ ಲಭ್ಯ. ಶೇ. 100ರಷ್ಟು ಮೀಸಲಾತಿ ಮಾಡಿದರೂ ಉದ್ಯೋಗ ಸಿಗುವುದು 3,000 ಅಭ್ಯರ್ಥಿಗಳಿಗೆ. ಇನ್ನುಳಿದ 29.97 ಲಕ್ಷ ಅಭ್ಯರ್ಥಿಗಳು ನಿರುದ್ಯೋಗಿಗಳೇ ಆಗುತ್ತಾರೆ ಅಥವಾ ಸಂಪೂರ್ಣ ಮೀಸಲಾತಿ ತೆಗೆದುಹಾಕಿ ಬಿಟ್ಟರೂ ಸಿಗುವುದು 3,000 ಉದ್ಯೋಗಗಳೇ. ಆಗಲೂ 29.97 ಲಕ್ಷ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುವುದಿಲ್ಲ.

ಆದರೆ ಆ 29.97 ಲಕ್ಷ ಅಭ್ಯರ್ಥಿಗಳಲ್ಲಿ ದಲಿತ ಹಾಗೂ ಹಿಂದುಳಿದ ಸಮುದಾಯದ ಅಭ್ಯರ್ಥಿಗಳು ಹೆಚ್ಚಿಗೆ ಇರುವ ಸಾಧ್ಯತೆ ಜಾಸ್ತಿ. ಹೀಗಾಗಿ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ನೋಡಿದರೆ ಇವೆರಡು ಸಂದರ್ಭಗಳ ನಡುವೆ ಆಯ್ಕೆ ಮಾಡಿಕೊಳ್ಳುವ ತುರ್ತು ಬಂದಲ್ಲಿ, 1,500 ಹಿಂದುಳಿದವ ರಿಗಾದರೂ ಉದ್ಯೋಗ ಸಿಗುವ ಆಯ್ಕೆ ಮಾಡಿಕೊಳ್ಳುವುದು ಸಹಜ.

ಆದರೆ ಈ ಆಯ್ಕೆಯ ಫಲಾನುಭವವು ಉಳಿದ 29.97 ಲಕ್ಷ ದಲಿತ-ಹಿಂದುಳಿದ ಸಹೋದರ-ಸಹೋದರಿಯರ ಉದ್ಯೋಗದ ಪ್ರಶ್ನೆಯನ್ನು ಮರೆಸಬಾರದಲ್ಲವೇ? ವಾಸ್ತವದಲ್ಲಿ ಇದೇ ಮೀಸಲಾತಿಯ ಶಕ್ತಿ ಮತ್ತು ಮಿತಿ ಕೂಡಾ ಆಗಿದೆ.

ಹೀಗಾಗಿ ಉದ್ಯೋಗ ಮತ್ತು ಶಿಕ್ಷಣದ ಅವಕಾಶಗಳು ಹೆಚ್ಚಾಗದೆ ಮೀಸಲಾತಿಯ ಪ್ರಮಾಣ ಮಾತ್ರ ಹೆಚ್ಚಿಸಿದರೆ ಅಥವಾ ಒಳಮೀಸಲಾತಿ ಒದಗಿಸಿದರೆ ಬಹುಜನರಿಗೆ ಹೆಚ್ಚಿನ ಪ್ರಯೋಜನವೂ ಇಲ್ಲ.

ಖಾಸಗೀಕರಣ- ಕಾರ್ಪೊರೇಟ್ ಬ್ರಾಹ್ಮಣ್ಯ

ಆದರೆ 1991ರ ನಂತರದಲ್ಲಿ ಖಾಸಗೀಕರಣ, ಜಾಗತೀಕರಣ ನೀತಿಗಳು ಸಾಂವಿಧಾನಿಕ ಪ್ರತಿಕ್ರಾಂತಿಯನ್ನೇ ಮಾಡಿಬಿಟ್ಟವು. ಕಲ್ಯಾಣ ರಾಜ್ಯದ ಬದಲಿಗೆ ಕಾರ್ಪೊರೇಟ್ ರಾಜ್ಯ, ಸಾಮಾಜಿಕ ನ್ಯಾಯದ ಬದಲಿಗೆ ಸಮರ್ಥ ಆಡಳಿತ, ಉತ್ತರದಾಯಿತ್ವದ ಬದಲಿಗೆ ಖಾಸಗಿ ಸ್ವಾಯತ್ತತೆಗಳು ಮೌಲ್ಯಗಳಾದವು. ಕನಿಷ್ಠ ಸರಕಾರ, ಗರಿಷ್ಠ ಆಡಳಿತ ಇವೆಲ್ಲಾ ಆಡಳಿತದ ಪ್ರಾತಿನಿಧ್ಯದಲ್ಲಿ ಸಾಮಾಜಿಕ ನ್ಯಾಯವನ್ನು ನಿರಾಕರಿಸುವ ಸಾಧನವಾದರೆ, ಶಿಕ್ಷಣ ಮತ್ತು ಉದ್ಯಮಗಳಲ್ಲಿ ಖಾಸಗೀಕರಣ ನೀತಿಗಳು ಸಂವಿಧಾನಾತ್ಮಕವಾಗಿ ದಲಿತ ಹಿಂದುಳಿದ ಸಮುದಾಯಗಳಿಗೆ ಅವಕಾಶಗಳನ್ನು ಮತ್ತು ಪ್ರಾತಿನಿಧ್ಯವನ್ನು ನಿರಾಕರಿಸಿ ಮರುಬ್ರಾಹ್ಮಣಶಾಹೀಕರಿಸುವ ಸಾಧನವಾಗಿ ಜಾರಿಯಾಗಿವೆ.

ಇಂದು ಮೋದಿ ಸರಕಾರದ ಅವಧಿಯಲ್ಲಿ ದೇಶದ ಆಡಳಿತ ಮತ್ತು ಆರ್ಥಿಕತೆಯ ಕಾರ್ಪೊರೇಟೀಕರಣ ಮತ್ತು ಬ್ರಾಹ್ಮಣೀಕರಣಗಳು ಉತ್ತುಂಗವನ್ನು ಮುಟ್ಟಿರುವ ಹೊತ್ತಿನಲ್ಲಿ ಮೀಸಲಾತಿಯ ಮೇಲೆ ಖಾಸಗೀಕರಣದ ಪರಿಣಾಮವನ್ನೂ ಅರ್ಥಮಾಡಿಕೊಳ್ಳದ ಸಾಮಾಜಿಕ ನ್ಯಾಯದ ಹೋರಾಟ ಆಳುವವರು ವಿಧಿಸಿರುವ ಚೌಕಟ್ಟಿನಲ್ಲೇ ಅಳುತ್ತಾ ಕೂರಬೇಕಾದ ಅಪಾಯವನ್ನು ಒಡ್ಡಿದೆ.

ಖಾಸಗಿಯಲ್ಲಿ ಮೀಸಲಾತಿ: ಹಾವಿನ ಹಂಗು, ಬಾಲದ ಜೊತೆ ಚೌಕಾಸಿ?

ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಸಿಗುವುದು ಸರಕಾರಿ ವಲಯದಲ್ಲೇ ವಿನಾ ಖಾಸಗಿ ವಲಯದಲ್ಲಲ್ಲ. ಖಾಸಗಿ ವಲಯಕ್ಕೆ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿದರೆ ಸರಕಾರ ಕೆಲವು ಉತ್ತೇಜನಗಳನ್ನು ಘೋಷಿಸಬಹುದೇ ವಿನಾ ಮೀಸಲಾತಿ ಕೊಡದಿದ್ದರೆ ಶಿಕ್ಷಿಸುವ ಅವಕಾಶ ನಮ್ಮ ಸಂವಿಧಾನದಲ್ಲಿಲ್ಲ.

ಅಷ್ಟು ಮಾತ್ರವಲ್ಲ. ದೇಶದ ಉದ್ಧಾರವಾಗುವುದೇ ಖಾಸಗಿ ದೇಶೀ ಮತ್ತು ವಿದೇಶೀ ಬಂಡವಾಳಗಳ ಹೂಡಿಕೆಯಿಂದ ಮಾತ್ರ ಎಂಬ ಸಂವಿಧಾನ ವಿರೋಧಿ ತತ್ವವು ಎಡದಿಂದ-ಬಲದವರೆಗಿನ ಎಲ್ಲಾ ರಾಜಕೀಯ ಪಕ್ಷಗಳ ಒಪ್ಪಿಗೆ ಪಡೆದಿರುವುದರಿಂದ ಖಾಸಗಿಯನ್ನು ಸಾಮಾಜಿಕ ನ್ಯಾಯಕ್ಕೆ ಬಗ್ಗಿಸುವ ರಾಜಕೀಯ ಇಚ್ಛಾಶಕ್ತಿ ಯಾವ ಚುನಾವಣಾ ರಾಜಕೀಯ ಪಕ್ಷಗಳಿಗೂ ಇಲ್ಲ.

ಹೀಗಾಗಿ 1991ರಿಂದ ಸರ್ವ ಸಮ್ಮತವಾಗಿ ಈ ದೇಶದ ಮೀಸಲಾತಿಯ ಮೇಲೆ ಮತ್ತು ಸಾಮಾಜಿಕ ನ್ಯಾಯದ ಮೇಲೆ ರಾಜಕೀಯ-ಆರ್ಥಿಕ-ಸಾಂಸ್ಕೃತಿಕ ದಾಳಿ ನಡೆಯುತ್ತಾ ಬಂದಿದೆ.

ಜೊತೆಗೆ ಈ ದೇಶದ ಒಟ್ಟಾರೆ ಉದ್ಯೋಗ ಸೃಷ್ಟಿಯಲ್ಲಿ ಶೇ. 92 ಭಾಗ ಸೃಷ್ಟಿಯಾಗುವುದು ಅಸಂಘಟಿತ ವಲಯದಲ್ಲಿ. ಕೃಷಿ, ಬೀದಿ ವ್ಯಾಪಾರ, ಸಣ್ಣ, ಅತಿಸಣ್ಣ ಉದ್ದಿಮೆ..ಇತ್ಯಾದಿಗಳಲ್ಲಿ. ಇನ್ನು ಶೇ. 8 ಭಾಗ ಮಾತ್ರ ಸಂಘಟಿತ ಎಂದರೆ ನಿಗದಿತ ಸಂಬಳ, ಸೌಲಭ್ಯ, ಪೆನ್ಷನ್, ಕಾರ್ಮಿಕ ಹಕ್ಕುಗಳು ಇರುವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾರೆ.

ಹೆಚ್ಚು ಉದ್ಯೋಗ-ಮೀಸಲಾತಿ ಕೊಡುತ್ತಿರುವುದು ಸರಕಾರಿ ವಲಯವೇ

ಹೊಸದಿಲ್ಲಿಯ ಇನ್‌ಸ್ಟಿಟ್ಯೂಟ್ ಫಾರ್ ಸ್ಟಡೀಸ್ ಆಫ್ ಇಂಡಸ್ಟ್ರೀಯಲ್ ಡೆವಲಪ್ಮೆಂಟ್ (ಐಎಸ್‌ಐಡಿ) ಸಂಸ್ಥೆಯು ಮಾಡಿರುವ ಅಧ್ಯಯನದ ಪ್ರಕಾರ ಈ ಸಂಘಟಿತ ವಲಯದೊಳಗೆ 1981ರಲ್ಲಿ 1.65 ಕೋಟಿ ಜನರು ಸಾರ್ವಜನಿಕ ವಲಯದಲ್ಲಿ ಕೆಲಸಮಾಡುತ್ತಿದ್ದರು.

ಅದರ ಅರ್ಥ 1.65 ಕೋಟಿ ಉದ್ಯೋಗಗಳಲ್ಲಿ ಶೇ. 22.3ರಷ್ಟು ಉದ್ಯೋಗಗಳು ಅಂದರೆ 36 ಲಕ್ಷದಷ್ಟು ಉದ್ಯೋಗಾವಕಾಶಗಳು ಮೀಸಲಾಗಿರುತ್ತಿತ್ತು. ಆದರೆ ಅಷ್ಟೂ ಭರ್ತಿಯಾಗುತ್ತಿರಲಿಲ್ಲ ಎನ್ನುವುದು ಬೇರೆ ಮಾತು.

ಇದು 1997ರಲ್ಲಿ 1.95 ಕೋಟಿಗೆ ತಲುಪಿತು. 1989ರಲ್ಲಿ ಮಂಡಲ್ ವರದಿ ಜಾರಿಯಾಗಿದ್ದರಿಂದ ಇದರಲ್ಲಿ ಅಂದಾಜು 1 ಕೋಟಿ ಉದ್ಯೋಗಗಳು ದಲಿತ ಮತ್ತು ಹಿಂದುಳಿದ ಸಮುದಾಯಗಳಿಗೆ ದಕ್ಕಿತು. ಆಗಲೂ ಅದರ ಪೂರ್ತಿ ಲಾಭವನ್ನು ಪಡೆದುಕೊಳ್ಳುವಷ್ಟು ಸಾಧ್ಯತೆಗಳು ಈ ಸಮುದಾಯಗಳಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಯಿತು ಎಂಬುದು ಮತ್ತೊಂದು ವಿಷಯ. ಆದರೆ ಸಾರ್ವಜನಿಕ ಕ್ಷೇತ್ರವು ಹೆಚಾಗುತ್ತಿದ್ದುದರಿಂದ ಅಷ್ಟು ಅವಕಾಶವಂತೂ ದಲಿತ-ಹಿಂದುಳಿದ ಸಮುದಾಯಕ್ಕೆ ದಕ್ಕುತ್ತಿತ್ತು.

ಆದರೆ, ಅಲ್ಲಿಂದಾಚೆಗೆ 1997-2012ರ ಅವಧಿಯಲ್ಲಿ ಖಾಸಗೀಕರಣ, ಉದಾರೀಕರಣ ನೀತಿಗಳು ವೇಗವಾಗಿ ಜಾರಿಯಾಗತೊಡಗುತ್ತಾ ಸಾರ್ವಜನಿಕ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು 1.75 ಕೋಟಿಗೆ ಕುಸಿದಿತ್ತು.

ಅಂದರೆ ಈ ಅವಧಿಯಲ್ಲಿ ಖಾಸಗೀಕರಣದ ಜಾರಿಯಿಂದಾಗಿ ದಲಿತ -ಹಿಂದುಳಿದ ಸಮುದಾಯಗಳಿಗೆ ಕೇವಲ ಕೇಂದ್ರ ಸರಕಾರದ ಅಧೀನದಲ್ಲಿರುವ ಉದ್ದಿಮೆಗಳಲ್ಲಿ ದೊರೆಯಬೇಕಾಗಿದ್ದ 10 ಲಕ್ಷ ಉದ್ಯೋಗಾವಕಾಶಗಳು ಕಣ್ಮರೆಯಾದವು. ಇದು 2014-23ರ ಮೋದಿ ಅವಧಿಯಲ್ಲಿ ಇನ್ನೂ ಶೀಘ್ರಗತಿಯಲ್ಲಿ ಕುಸಿದಿದೆ.

ಆದರೆ, 1981 ರಲ್ಲಿ 65 ಲಕ್ಷ ಜನರಿಗೆ ಉದ್ಯೋಗ ಕೊಡುತ್ತಿದ್ದ ಖಾಸಗಿ ಸಂಘಟಿತ ಕ್ಷೇತ್ರ 40 ವರ್ಷಗಳ ನಂತರ 2019ರ ವೇಳೆಗೆ ಸರಕಾರಗಳಿಂದ ಸಕಲ ಸೌಲಭ್ಯಗಳನ್ನು ಪಡೆದುಕೊಂಡರೂ ಸಹ ಉದ್ಯೋಗ ಸೃಷ್ಟಿಸಿದ್ದು ಕೇವಲ 98 ಲಕ್ಷಗಳನ್ನು ಮಾತ್ರ. ಅಂದರೆ ಕೇವಲ 30 ಲಕ್ಷ ಹೆಚ್ಚುವರಿ ಉದ್ಯೋಗಗಳನ್ನು ಮಾತ್ರ.

ಆದರೆ ಅವ್ಯಾವುವೂ ದಲಿತ ಮತ್ತು ಹಿಂದುಳಿದ ಸಮುದಾಯಗಳಿಗೆ ಉದ್ಯೋಗಾವಕಾಶಗಳನ್ನು ನಿಯಮಬದ್ಧವಾಗಿ ಕಲ್ಪಿಸಲಿಲ್ಲ.

(http://111.93.232.162/pdf/ICSSR_TSP_PPS.pdf)

ಮತ್ತೊಂದು ಅಧ್ಯಯನದ ಪ್ರಕಾರ ಖಾಸಗೀಕರಣದ ನಂತರದ 25 ವರ್ಷಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿ ಸೃಷ್ಟಿಯಾದ ಹೊಸ 6.1 ಕೋಟಿ ಉದ್ಯೋಗಗಳಲ್ಲಿ. ಶೇ. 92ರಷ್ಟು ಉದ್ಯೋಗಗಳು ಅನೌಪಚಾರಿಕ ಅಂದರೆ ಯಾವುದೇ ಸಾಮಾಜಿಕ ನ್ಯಾಯ ಮಾತ್ರವಲ್ಲ ಕಾರ್ಮಿಕ ಹಕ್ಕು ಹಾಗೂ ಸೌಲಭ್ಯಗಳು ಇಲ್ಲದ ವಲಯದಲ್ಲಿ ಸೃಷ್ಟಿಯಾಗಿದ್ದವು.

(https://scroll.in/.../data-check-90-of-jobs-created-in...)

share
ಶಿವಸುಂದರ್
ಶಿವಸುಂದರ್
Next Story
X