ಬದ್ರಿನಾಥ್ ನಲ್ಲಿ ಭೂಕುಸಿತ: ಕೊಚ್ಚಿಹೋದ ಹೆದ್ದಾರಿಯ ಭಾಗ; ಸಿಲುಕಿಕೊಂಡ ಪ್ರವಾಸಿಗರು
ಫೋಟೋ: PTI, ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಭಾರೀ ಮಳೆಯಿಂದಾಗಿ ಉಂಟಾದ ಭೂಕುಸಿತದಿಂದ ಇಂದು ಉತ್ತರಾಖಂಡದ ಚಮೋಲಿಜಿಲ್ಲೆಯ ಪ್ರಮುಖ ಹೆದ್ದಾರಿಯ ಒಂದು ಭಾಗ ಕೊಚ್ಚಿಕೊಂಡು ಹೋಗಿದ್ದು ಪ್ರವಾಸಿಗರು ಸಿಕ್ಕಿಹಾಕಿಕೊಂಡಿದ್ದಾರೆ.
ಬದ್ರಿನಾಥ್ ಗೆ ಸಂಪರ್ಕ ಕಲ್ಲಿಸುವ ರಾಷ್ಟ್ರೀಯ ಹೆದ್ದಾರಿ 7 ರ ಒಂದು ಭಾಗ ಕೊಚ್ಚಿಕೊಂಡು ಹೋಗಿದೆ.
ಭಾರೀ ಮಳೆ ಹಾಗೂ ಭೂಕುಸಿತದಿಂದಾಗಿ ನೆರೆಯ ಹಿಮಾಚಲ ಪ್ರದೇಶದಲ್ಲಿ ಮಂಡಿ ಹಾಗೂ ಕುಲ್ಲುವನ್ನು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿ, 200 ಪ್ರವಾಸಿಗರು ಸಿಕ್ಕಿಬಿದ್ದಿದ್ದರು. 15 ಕಿ.ಮೀ ಉದ್ದದ ಟ್ರಾಫಿಕ್ ಜಾಮ್ ಅನ್ನು ಎದುರಿಸಿದ್ದ 3 ದಿನಗಳ ನಂತರ ಈ ಘಟನೆ ನಡೆದಿದೆ.
ಮಳೆ ಸಂಬಂಧಿತ ಘಟನೆಗಳಿಂದಾಗಿ ಹಿಮಾಚಲ ಪ್ರದೇಶದಲ್ಲಿ 19 ಜನರು ಸಾವನ್ನಪ್ಪಿದ್ದಾರೆ. 34 ಮಂದಿ ಗಾಯಗೊಂಡಿದ್ದಾರೆ ಮತ್ತು ಇತರ ಮೂವರು ಕಾಣೆಯಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆಯು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರಿ ಮಳೆಗಾಗಿ ಆರೆಂಜ್ ಅಲರ್ಟ್ ನೀಡಿದೆ.
Next Story