ಪುತ್ತೂರು: ಗಂಡನಿಂದ ಹಿಂಸೆ; ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪುತ್ತೂರು: ಗಂಡನಿಂದ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಕುರಿತು ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರು ಬಗ್ಗೆ ವರದಿಯಾಗಿದೆ.
ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ನಿವಾಸಿ ನಝ್ಮಿಯಾ ದೂರುದಾರ ಮಹಿಳೆ. 2018 ಫೆ.1 ರಂದು ಕಾವೇರಿಕಟ್ಟೆ ನಿವಾಸಿ ರಫೀಕ್ ಕೆ.ಟಿ ಎಂಬವರೊಂದಿಗೆ ಮದುವೆ ಆಗಿದ್ದು, 3 ವರ್ಷದ ಗಂಡು ಮಗು ಕೂಡಾ ಇದೆ. ಆದರೆ ಗಂಡ ನನಗೆ ನಿರಂತರ ಹಿಂಸೆ ನೀಡುತ್ತಿದ್ದಾರೆ. ಹಲವು ಬಾರಿ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ್ದಾರೆ ಎಂದು ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿನಲ್ಲಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ದೂರು ಸ್ವೀಕರಿಸಿದ ನ್ಯಾಯಾಲಯ, ಮಹಿಳಾಪುತ್ತೂರು: ಗಂಡನಿಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ನೀಡಿದ ಆದೇಶದ ಮೇರೆಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story