Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ತುಮಕೂರು
  4. ತುಮಕೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್...

ತುಮಕೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ : ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 Dec 2024 12:58 PM IST
share
ತುಮಕೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ : ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ತುಮಕೂರು : ತುಮಕೂರಿನ ಕೋರ ಹೋಬಳಿಯ ಪಿ.ಗೊಲ್ಲಹಳ್ಳಿ ಹತ್ತಿರ ನೂತನ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ʼಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಿದ್ದೇವೆ. ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ. ಆದಷ್ಟು ಶೀರ್ಘದಲ್ಲಿ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಿ ಎಂದು ಸೂಚನೆ ನೀಡಿದ್ದೇನೆʼ ಎಂದು ತಿಳಿಸಿದರು.

ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದೆ. ಮೈಸೂರಿನಲ್ಲೂ ಜಾಗ ಕೊಡುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂಗೆ ಭೂಮಿ ಮಂಜೂರಾಗಿರುವ ಆದೇಶ ಪತ್ರವನ್ನು ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಹಸ್ತಾಂತರಿಸಲಾಯಿತು.

ಬಳಿಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು ಮಾತನಾಡಿ, ಭಾರತೀಯ ಕ್ರಿಕೆಟ್ ಮಂಡಳಿಯವರಿಗೆ ಅಭಿನಂದನೆಗಳನ್ನು ತಿಳಿಸಿದರು.

ಸುಮಾರು ವರ್ಷಗಳಿಂದ ಕನಸಾಗಿದ್ದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಜೊತೆಗೆ ಅಂತಾರಾಷ್ಟ್ರೀಯ ಕ್ರಿಕೆಟ್ ತರಬೇತಿಗೆ ಅಡಿಗಲ್ಲು ಹಾಕಲಾಗಿದೆ. ಕೆಎಸ್‌ಸಿಎ ಎರಡು ವರ್ಷದಲ್ಲಿ ಸ್ಟೇಡಿಯಂ ನಿರ್ಮಾಣದ ಕಾಮಗಾರಿಯನ್ನು ಪೂರ್ಣಗೊಳಿಸುವುದಾಗಿ ತಿಳಿಸಿದೆ ಎಂದು ಹೇಳಿದರು.

ವಸಂತನರಸಾಪುರದಲ್ಲಿ 20 ಸಾವಿರ ಎಕರೆ ಭೂಮಿಯನ್ನು ಕೈಗಾರಿಕಾ ಪ್ರದೇಶಕ್ಕೆ ನೀಡಲಾಗಿದೆ‌. ಏಷ್ಯದಲ್ಲಿ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಎಲ್ಲ ರೀತಿಯ ಸಹಕಾರ ಕೊಟ್ಟಿದ್ದಾರೆ. ಫುಡ್ ಪಾರ್ಕಿಂಗ್ ಆರಂಭವಾಗಿದ್ದು, ಜಪಾನೀಸ್ ಟೌಪ್‌ಶಿಪ್‌ ನಿರ್ಮಾಣಕ್ಕೆ 500 ಎಕರೆ ನೀಡಲಾಗಿದೆ ಎಂದು ತಿಳಿಸಿದರು.

ಈ ಭಾಗದ ಜನರು ಕೈಗಾರಿಕಾ‌ ಪ್ರದೇಶಕ್ಕಾಗಿ ಭೂಮಿಯನ್ನು ಕಳೆದುಕೊಂಡಿದ್ದು, ಅವರಿಗೆ ಉದ್ಯೋಗ ಸಿಗುವಂತಾಗಬೇಕು. ಸ್ಥಳೀಯರಿಗೆ ಹೆಚ್ಚಿನ ಒತ್ತು ನೀಡಬೇಕು. ತುಮಕೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಎಲ್ಲ ವಿಧಾನಸಭಾ ಕ್ಷೇತ್ರಗಳಿಗು ಅನುದಾನ ನೀಡಬೇಕು ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆ.ಎನ್.ರಾಜಣ್ಣ, ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.‌ ಕೆ.ಗೋವಿಂದರಾಜು, ಶಾಸಕರಾದ ಬಿ.ಸುರೇಶ್‌ಗೌಡ, ಜ್ಯೋತಿಗಣೇಶ್, ಸುರೇಶ್, ಶ್ರೀನಿವಾಸ್, ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಆರ್‌.ರಾಜೇಂದ್ರ, ಕೆಎಸ್‌ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್, ಮಾಜಿ ಶಾಸಕ ಗೌರಿಶಂಕರ್, ಕೆಪಿಸಿಸಿ ಉಪಾಧ್ಯಕ್ಷ ಮುರಳೀಧರ್ ಹಾಲಪ್ಪ ಮುಂತಾದವರು ಇದ್ದರು.

ಮುಖ್ಯಮಂತ್ರಿ @siddaramaiah ಅವರು ತುಮಕೂರಿನಲ್ಲಿ ಇಂದು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.ಗೃಹ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ದೆಹಲಿ… pic.twitter.com/GONOJBPCdD

— CM of Karnataka (@CMofKarnataka) December 2, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X