ಕೊರಟಗೆರೆ |ಕಾರಿಗೆ ಲಾರಿ ಢಿಕ್ಕಿ: ಇಬ್ಬರು ಯುವಕರು ಮೃತ್ಯು
ಸಾಂದರ್ಭಿಕ ಚಿತ್ರ
ಕೊರಟಗೆರೆ: ಕಾರಿಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಕೊರಟಗೆರೆ ತಾಲೂಕಿನ ಕಂಬದಹಳ್ಳಿ ಬಳಿ ಸೋಮವಾರ ಬೆಳಗಿನ ಜಾವ ಸಂಭವಿಸಿದೆ.
ತಾಲೂಕಿನ ಹೊಳವನಹಳ್ಳಿ ಗ್ರಾಮದ ಪ್ರವೀಣ್ (23), ಹರ್ಷಿತ್ (22) ಮೃತಪಟ್ಟ ಯುವಕರು.
ಗೋವಾಕ್ಕೆ ತೆರಳಿದ್ದ ಇವರು ಕಾರಿನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಮಧುಗಿರಿ ಕಡೆಯಿಂದ ಬರುತ್ತಿದ್ದ ಕಾರು ಹಾಗೂ ಕಂಬದಹಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಈ ಬಗ್ಗೆ ಕೊರಟಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story