ತುಮಕೂರು | ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ ನಿಧನ
ತುಮಕೂರು : ಮಾಜಿ ಸಂಸದ ಸಿ.ಪಿ.ಮೂಡಲಗಿರಿಯಪ್ಪ (84) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದಾರೆ.
ಉಸಿರಾಟದ ತೊಂದರೆಯಿಂದಾಗಿ ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ. ಮೃತರು ಪತ್ನಿ ಲಕ್ಷ್ಮಿದೇವಮ್ಮ, ಪುತ್ರಿ ಕವಿತಾ, ಪುತ್ರ ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ಗೌಡ ಅವರನ್ನು ಅಗಲಿದ್ದಾರೆ.
ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದ ಸಿ.ಪಿ.ಮೂಡಲಗಿರಿಯಪ್ಪ ಅವರು 1985ರಲ್ಲಿ ಮೊದಲ ಪ್ರಯತ್ನದಲ್ಲೇ ಶಿರಾ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದರು.
ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದ ಕಡೆ ಮುಖ ಮಾಡಿದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ 1989, 1991 ಮತ್ತು 1998ರಲ್ಲಿ ಜಯಗಳಿದ್ದರು. ಮೂರು ಬಾರಿ ಲೋಕಸಭೆ ಪ್ರತಿನಿಧಿಸಿದ್ದರು.
ಶಿರಾ ವಿಧಾನಸಭೆಗೆ 2020ರಲ್ಲಿ ನಡೆದ ಉಪಚುನಾವಣೆಯಲ್ಲಿ ಮೂಡಲಗಿರಿಯಪ್ಪ ಪುತ್ರ ಡಾ.ಸಿ.ಎಂ.ರಾಜೇಶ್ಗೌಡ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು.
Next Story