ಪಾವಗಡ | ಬುಲೆರೋ-ಲಾರಿ ನಡುವೆ ಡಿಕ್ಕಿ : ಒರ್ವ ಮೃತ್ಯು
ಪಾವಗಡ : ಪಟ್ಟಣದ ತುಮಕೂರು ರಸ್ತೆಯ ಎಸ್ ಆರ್ ಎಸ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಮಂಗಳವಾರ ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬುಲೆರೋ ವಾಹನದ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಮೃತ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಗಿರೀಶ್ (21) ಎಂದು ಗುರುತಿಸಲಾಗಿದೆ.
ತುಮಕೂರು ರಸ್ತೆಯಿಂದ ಪಾವಗಡದ ಕಡೆ ಬರುತ್ತಿದ್ದಂತಹ ಬುಲೆರೋ ಮುಂಭಾಗದಲ್ಲಿ ಹೋಗುತ್ತಿದ್ದ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
Next Story