ತುಮಕೂರು | ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹತ್ಯೆ
ತುಮಕೂರು : 7ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ನಗರದ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ತ್ರಿಶಾಲ್ (13) ಎಂದು ಗುರುತಿಸಲಾಗಿದೆ. ತ್ರಿಶಾಲ್ ಆತ್ಮಹತ್ಯೆಗೂ ಮುನ್ನ ಬರೆದಿದ್ದ ಡೆತ್ನೋಟ್ವೊಂದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ತ್ರಿಶಾಲ್ ಸ್ಥಳೀಯ ಶಾಲೆಯೊಂದರಲ್ಲಿ 7 ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಎಂದಿನಂತೆ ಇಂದು ಶಾಲೆಗೆ ತೆರಳಿ ಮನೆಗೆ ವಾಪಸ್ ಆಗಿರುವ ಬಾಲಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಜಯನಗರ ಪೊಲೀಸ್ ಹಾಗೂ ಬೆರಳಚ್ಚು ತಂಡದ ಅಧಿಕಾರಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story