ತುಮಕೂರು | ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ
ಗುಬ್ಬಿ : ಮಹಿಳೆಯೊರ್ವಳು ತನ್ನ ಇಬ್ಬರು ಮಕ್ಕಳ ಜೊತೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ವಿಜಯಲಕ್ಷ್ಮಿ (35), ಮಕ್ಕಳಾದ ಚುಡಾಮಣಿ (12) ಹಾಗೂ ನರಸಿಂಹ (10) ಎಂದು ಗುರುತಿಸಲಾಗಿದೆ.
ಮಕ್ಕಳಿಬ್ಬರು ಹುಟ್ಟಿನಿಂದಲೇ ಬುದ್ದಿಮಾಂದ್ಯರಾಗಿದ್ದು, ಅದೇ ಕೊರಗಿನಲ್ಲಿ ತಾಯಿಯು ಅನಾರೋಗ್ಯ ಪೀಡಿತರಾಗಿದ್ದರು ಎನ್ನಲಾಗಿದೆ.
ಗುರುವಾರ ಕುಟುಂಬದ ಯಜಮಾನ ಮಹದೇವಯ್ಯ ಕಾರ್ಯನಿಮಿತ್ತ ತುಮಕೂರಿಗೆ ಹೋಗಿದ್ದ ಸಂದರ್ಭದಲ್ಲಿ ತಾಯಿ ವಿಜಯಲಕ್ಷ್ಮಿ, ತನ್ನ ಮಕ್ಕಳಿಬ್ಬರನ್ನು ಹಗ್ಗದಿಂದ ನೇಣುಹಾಕಿ ನಂತರ ಆಕೆಯೂ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಪತಿ ಮಹದೇವಯ್ಯ ಮನೆಗೆ ಬಂದ ನಂತರ ಘಟನೆ ಬೆಳಕಿಗೆ ಬಂದಿದ್ದು, ತಕ್ಷಣ ಅಕ್ಕಪಕ್ಕದ ಮನೆಯವರು ಸೇರಿಕೊಂಡು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಚೇಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.