ತುಮಕೂರು | ಫುಡ್ ಫ್ಯಾಕ್ಟರಿಯಲ್ಲಿ ಆಯಿಲ್ ಟ್ಯಾಂಕ್ ಬ್ಲಾಸ್ಟ್: ಇಬ್ಬರು ಕಾರ್ಮಿಕರು ಮೃತ್ಯು

ಸಾಂದರ್ಭಿಕ ಚಿತ್ರ (PTI)
ತುಮಕೂರು : ನಗರದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿನ ಫುಡ್ ಫ್ಯಾಕ್ಟರಿಯಲ್ಲಿ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪರಿಮಳ ಆಗ್ರೋ ಫುಡ್ ಕಂಪನಿಯಲ್ಲಿ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ.
ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಸ್ಫೋಟಗೊಂಡಿದ್ದು ಬಿಹಾರ ಮೂಲದ ಸಂತೋಷ್, ಚಂದನ್ ಶರ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ.
ಸದ್ಯ ಗಾಯಾಳು ಕಾರ್ಮಿಕರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
Next Story