ಸಿಎನ್ಜಿ ಪೂರೈಕೆಯಲ್ಲಿ ವ್ಯತ್ಯಯ: ನ.15ರಂದು ಉಡುಪಿ ಜಿಲ್ಲಾಧಿಕಾರಿಗಳಿಂದ ಸಭೆ
ಉಡುಪಿ, ನ.13: ಉಡುಪಿ ಜಿಲ್ಲೆಯಲ್ಲಿ ಸಿ.ಎನ್.ಜಿ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ಉಡುಪಿ ಜಿಲ್ಲೆಯ ಸಿ.ಎನ್.ಜಿ ಇಂಧನವನ್ನು ಪೂರೈಸುತ್ತಿರುವ ಪೆಟ್ರೋಲ್ ಬಂಕ್ಗಳ ಮಾಲಕರು ಮತ್ತು ವಾಹನದ ಮಾಲಕರು ಪದೇ ಪದೇ ದೂರು ನೀಡುತ್ತಿರುವ ಹಿನ್ನೆಲೆಯಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಸೂಚನೆ ಯಂತೆ ಉಡುಪಿ ಜಿಲ್ಲಾಧಿಕಾರಿ ಅವರು ನ.15ರಂದು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಇದರಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರು ಶುಕ್ರವಾರ ಬೆಳಗ್ಗೆ 10:30ಕ್ಕೆ ಪೂರೈಕೆದಾರ ಕಂಪೆನಿಯಾದ ಅದಾನಿ ಕಂಪೆನಿಯ ನಿರ್ದೇಶಕರು ಮತ್ತು ಪೆಟ್ರೋಲ್ ಬಂಕಿನ ಮಾಲಕರ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಸಿ.ಎನ್.ಜಿ ಇಂಧನ ಪೂರೈಕೆಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಗುವುದು ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.
Next Story