ಉಡುಪಿ: ನ.22ರಂದು ನೇರ ಸಂದರ್ಶನ
ಉಡುಪಿ, ನ.21: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನ.22ರಂದು ಬೆಳಗ್ಗೆ 10:30ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ,ಲಿ., ಆಭರಣ ಜುವೆಲರ್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್, ಉಡುಪಿ ಇಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ. ಇಂಜಿನಿಯರಿಂಗ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿ ಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 8105774936 ಹಾಗೂ 9901472710 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story