Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಪಡುಬಿದ್ರೆ | '30 ಗ್ರಾಂ ಗೋಲ್ಡ್' ಮೂಲಕ...

ಪಡುಬಿದ್ರೆ | '30 ಗ್ರಾಂ ಗೋಲ್ಡ್' ಮೂಲಕ ವಂಚನೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ7 March 2024 2:45 PM IST
share
ಪಡುಬಿದ್ರೆ | 30 ಗ್ರಾಂ ಗೋಲ್ಡ್ ಮೂಲಕ ವಂಚನೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಪಡುಬಿದ್ರೆ, ಮಾ.7: ಸ್ಥಳೀಯವಾಗಿ ಬ್ಯಾಂಕ್, ಸೊಸೈಟಿಗಳಲ್ಲಿ '30 ಗ್ರಾಂ ಗೋಲ್ಡ್'ನ ಚಿನ್ನಾಭರಣಗಳನ್ನು ಅಡವಿಟ್ಟು ಲಕ್ಷಾಂತರ ರೂ. ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ನಾಲ್ವರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 5ಕ್ಕೆ ಏರಿದೆ.

ಕುಮುಟಾದ ನಿತಿಲ್ ಭಾಸ್ಕರ್ ಶೇಟ್(35), ಸಂಜಯ್ ಶೇಟ್(42), ಸಂತೋಷ್ ಶೇಟ್(39) ಹಾಗೂ ಬೆಳಗಾವಿಯ ಕೈಲಾಸ್ ಗೋರಾಡ(26) ಬಂಧಿತ ಆರೋಪಿಗಳು. ಇವರನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ., ನ್ಯಾಯಾಲಯವು ಬಂಧಿತರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿ ಪಡುಬಿದ್ರೆ ಕಂಚಿನಡ್ಕ ನಿವಾಸಿ, ಕೇರಳ ಮೂಲದ ಆರೋಪಿ ರಾಜೀವ್ ಎಂಬಾತನನ್ನು ಕೆಲ ದಿನಗಳ ಹಿಂದೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ನಕಲಿ 916 ಹಾಲ್ ಮಾರ್ಕ್ ಸೀಲ್ ಹಾಕಲು ಬಳಸಲಾಗುತ್ತಿದ್ದ ಸುಮಾರು 3.5 ಲಕ್ಷ ರೂ. ಮೌಲ್ಯದ ಮೆಷಿನ್, ಕಂಪ್ಯೂಟರ್ಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಂಚನೆ ಪ್ರಕರಣದಲ್ಲಿ ಬಂಧಿತ ಪ್ರಮುಖ ಆರೋಪಿ ರಾಜೀವ್ 30 ಗ್ರಾಂ ಗೋಲ್ಡ್ ಬಳಸಿ ಗಲ್ಫ್ ರಾಷ್ಟ್ರಕ್ಕೆ ತೆರಳಿ ಮತ್ತು ಅಲ್ಲಿಂದ ವಾಪಾಸಾಗುವ ವೇಳೆ ಶುದ್ಧ ಚಿನ್ನಾಭರಣ ಧರಿಸಿ ಬರುವ ತನ್ನ ಮೋಸದ ಜಾಲಕ್ಕೆ ಸಹಕರಿಸಲು ತನ್ನ ಗೆಳಯ ಆರೋಪಿ ನಿತಿಲ್ ಭಾಸ್ಕರ್ ಶೇಟ್ ನನ್ನು ಬಳಸಿಕೊಂಡಿದ್ದ. ಕುಮುಟಾದ ಇನ್ನಿಬ್ಬರು ಆರೋಪಿಗಳು ನಕಲಿ ಚಿನ್ನದ 40 ಬಳೆಗಳನ್ನು ತಯಾರಿಸಿಕೊಟ್ಟಿದ್ದರು. ಬೆಳಗಾವಿಯಲ್ಲಿ ನಕಲಿ ಹಾಲ್ ಮಾರ್ಕ್ ಮೊಹರನ್ನು ಹಾಕಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆದರೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿ ರಾಜೀವ್ ಸ್ಥಳೀಯವಾಗಿ ವಿತ್ತೀಯ ಸಂಸ್ಥೆಗಳಲ್ಲಿ ಅವುಗಳನ್ನು ಅಡವಿಟ್ಟು ವಂಚಿಸಿದ್ದರಿಂದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯು 30 ಗ್ರಾಂ ಗೋಲ್ಡ್ ನ್ನು ಅಸಲಿ ಚಿನ್ನವೆಂದು ನಂಬಿಸಿ ಬ್ಯಾಂಕ್, ಸೊಸೈಟಿಗಳಿಂದ ಚಿನ್ನಾಭರಣ ಈಡಿನ ಸಾಲ ಪಡೆದಿದ್ದ. ಸಾಲದ ಮೊತ್ತ ಮರುಪಾವತಿಯಾಗದ ಹಿನ್ನೆಲೆಯಲ್ಲಿ ಆ ಚಿನ್ನಾಭರಣವನ್ನು ಏಲಂ ಪ್ರಕ್ರಿಯೆ ನಡೆಸಿದಾಗೂ ಈ ವಂಚನೆ ಬೆಳಕಿಗೆ ಬಂದಿರಲಿಲ್ಲ. ಆದರೆ ಉಡುಪಿಯ ಬಿಡ್ಡುದಾರರೊಬ್ಬರು ಈ ಚಿನ್ನಾಭರಣವನ್ನು ಕತ್ತರಿಸಿ ಪರಿಶೀಲಿಸಿದಾಗ ಆರೋಪಿ ರಾಜೀವ್ ಮತ್ತಾತನ ಪತ್ನಿಯ ಚಿನ್ನಾಭರಣ ಸಾಲದ ಇಡೀ ಪ್ರಕರಣವು ಬೆಳಕಿಗೆ ಬಂದಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪಡುಬಿದ್ರೆಯಲ್ಲಿನ ಇಂಡಸ್ಟ್ರಿಯಲ್ ಬ್ಯಾಂಕಿನ ಪಡುಬಿದ್ರೆ ಶಾಖೆಯಲ್ಲಿ 2022ರ ಸೆ.1ರಿಂದ 2024ರ ಫೆ.26ರವರೆಗೆ ಈ ದಂಪತಿ 180 ಗ್ರಾಂ ನಕಲಿ ಚಿನ್ನವನ್ನಿಟ್ಟು 8.08 ಲಕ್ಷ ಸಾಲ ಪಡೆದಿದ್ದರು. ಸಹಕಾರಿ ಸಂಘವೊಂದರ ಸಿಟಿ ಶಾಖೆಯಿಂದ ಆರೋಪಿಗಳು ಸುಮಾರು 2ವರ್ಷಗಳ ಅವಯಲ್ಲಿ 23 1 ಗ್ರಾಂ ಹಾಗೂ 188 ಗ್ರಾಂ ನಕಲಿ ಚಿನ್ನವನ್ನು ಅಡವಿಟ್ಟು 19 ಲಕ್ಷ ರೂ. ಸಾಲ ಪಡೆದಿದ್ದಾರೆ. ಉಚ್ಚಿಲದ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ಮಾರ್ಚ್ 2023ರಿಂದ ಫೆ. 26, 2024ರ ಅವಧಿಯಲ್ಲಿ 72ಗ್ರಾಂ ಚಿನ್ನ ಅಡವಿಟ್ಟು 2.86 ಲಕ್ಷ ರೂ. ಗಳ ಸಹಿತ ಒಟ್ಟು 29.94 ಲಕ್ಷ ರೂ. ಸಾಲ ಪಡೆದಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X