ಉಡುಪಿ: ಅ.7ರಂದು ಕಸ ವಿಲೇವಾರಿ ಇಲ್ಲ
ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಪೌರಕಾರ್ಮಿಕರ ದಿನಾಚರಣೆಯನ್ನು ಅಕ್ಟೋಬರ್ 7ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗುವುದರಿಂದ ಈ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಕಸ ವಿಲೇವಾರಿ ಇರುವುದಿಲ್ಲ.
ಆದ್ದರಿಂದ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story