ಜ.1-10ರವರೆಗೆ 33ನೇ ಮದ್ಯವ್ಯಸನ ವಿಮುಕ್ತಿ ಶಿಬಿರ
ಉಡುಪಿ, ಡಿ.23: ಮುಂಬೈ ಕಮಲ್ ಎ.ಬಾಳಿಗಾ ಚಾರಿಟೇಬಲ್ ಟ್ರಸ್ಟ್, ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ, ಭಾರತೀಯ ವೈದ್ಯಕೀಯ ಸಂಘ ಉಡುಪಿ-ಕರಾವಳಿ, ಅಂಬಲಪಾಡಿ ಶ್ರೀಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನ, ಮಣಿಪಾಲ ರೋಟರಿ ಕ್ಲಬ್ಗಳ ಸಹಯೋಗ ದೊಂದಿಗೆ 33ನೇ ಮದ್ಯವ್ಯಸನ ವಿಮುಕ್ತಿ ಶಿಬಿರವನ್ನು ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ಸಭಾಂಗಣದಲ್ಲಿ ಜನವರಿ 1ರಿಂದ 10ರವರೆಗೆ ನಡೆಯಲಿದೆ ಎಂದು ಆಸ್ಪತ್ರೆಯ ಮನೋವೈದ್ಯ ಡಾ.ದೀಪಕ್ ಮಲ್ಯ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.1ರಂದು ಸಂಜೆ 4 ಗಂಟೆಗೆ ಶಿಬಿರವನ್ನು ಅಂಬಲಪಾಡಿ ದೇವಸ್ಥಾನದ ಧರ್ಮದರ್ಶಿ ಡಾ.ಎನ್.ಬಿ.ವಿಜಯ್ ಬಲ್ಲಾಳ್ ಉದ್ಘಾಟಿಸಲಿರುವರು. ಅಧ್ಯಕ್ಷತೆಯನ್ನು ಸಮೂಹ ಸಂಸ್ಥೆಗಳ ನಿರ್ದೇಶಕ ಡಾ.ಪಿ.ವಿ.ಭಂಡಾರಿ ವಹಿಸಲಿರುವರು. ಜ.10 ರಂದು ಬೆಳಿಗ್ಗೆ 10ಗಂಟೆಗೆ ಶಿಬಿರದ ಸಮಾರೋಪ ಸಮಾರಂಭದ ನಡೆಯಲಿದೆ ಎಂದರು.
ಶಿಬಿರಾರ್ಥಿಗಳಲ್ಲಿ ಕಂಡುಬರುವ ದೈಹಿಕ ಸಮಸ್ಯೆಗಳನ್ನು ಗುರುತಿಸಿ ಅದಕ್ಕೆ ಅನುಗುಣವಾದ ಚಿಕಿತ್ಸೆಯನ್ನು ನೀಡಲಾಗು ತ್ತದೆ. ಪ್ರತಿದಿನ ಶಿಬಿರಾರ್ಥಿಗಳಿಗೆ ಮದ್ಯ ಹಾಗೂ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮಗಳು ಮತ್ತು ಜೀವನ ಶೈಲಿ ಬದಲಾವಣೆ ಕುರಿತು ನುರಿತ ತಜ್ಞರಿಂದ ಮಾಹಿತಿ ಕಾರ್ಯಕ್ರಮ ನಡೆಯಲಿದೆ. ಸಂಜೆ ವಿವಿಧ ಕಾಲೇಜುಗಳಿಂದ ಮನೋರಂಜನೆ ಕಾರ್ಯ ಕ್ರಮಗಳು ನಡೆಯಲಿವೆೆ ಎಂದು ಅವರು ತಿಳಿಸಿದರು.
ಶಿಬಿರದಿಂದ ತೆರಳಿದ ನಂತರವೂ ಶಿಬಿರಾರ್ಥಿಗಳ ಪ್ರಗತಿಯನ್ನು ನಮ್ಮ ಸಮುದಾಯ ಕಾರ್ಯಕರ್ತರು ಮನೆ ಭೇಟಿ, ದೂರವಾಣಿ ಕರೆ ಮತ್ತು ಪತ್ರಗಳನ್ನು ಬರೆಯುವ ಮೂಲಕ ಅವರ ಮದ್ಯಮುಕ್ತ ಜೀವನವನ್ನು ನಿರಂತರವಾಗಿ ಪರಿಶೀಲಿ ಸಲಿದ್ದಾರೆ. ಇದರೊಂದಿಗೆ ಒಂದು ವರ್ಷದ ಅವಧಿಯವರೆಗೆ ಮರುಭೇಟಿ ದಿನಾಂಕವನ್ನು ನಿರ್ಧರಿಸಿ ಪ್ರತಿ ತಿಂಗಳು ಶಿಬಿರಾರ್ಥಿಗಳನ್ನು ಪರೀಕ್ಷಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಾಳಿಗಾ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸೌಜನ್ಯ ಶೆಟ್ಟಿ, ಮನೋ ವೈದ್ಯ ಡಾ.ಮಾನಸ್, ಮನಶಾಸ್ತ್ರಜ್ಞ ನಾಗರಾಜ ಮೂರ್ತಿ ಉಪಸ್ಥಿತರಿದ್ದರು.