ಜ.11ರಂದು ಉಡುಪಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ
ಉಡುಪಿ, ಜ.10: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2025ರ ಅಂಗವಾಗಿ ಗ್ರಾಹಕರಲ್ಲಿ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜನ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಪ್ರಗತಿಪರ ರೈತರು ಮತ್ತು ಮಾರುಕಟ್ಟೆ ದಾರರ ಸಹಯೋಗದೊಂದಿಗೆ ಸಿರಿಧಾನ್ಯ ಹಬ್ಬ ಶನಿವಾರ ಜ.11ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ನಡೆಯಲಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
ಅಲ್ಲದೇ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಜನವರಿ 21ರಂದು ಸಂಜೆ 4 ಗಂಟೆಗೆ ಮಲ್ಪೆ ಪೊಲೀಸ್ ಠಾಣೆ ಎದುರಿ ನಿಂದ ಸೀವಾಕ್‌ವರೆಗೆ ನಡೆಯಲಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಇದರಲ್ಲಿ ಸಾರ್ವಜನಿಕ ರು ಹಾಗೂ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story