Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಫೆ.11ರ ಮಣಿಪಾಲ ಮ್ಯಾರಥಾನ್‌ನಲ್ಲಿ...

ಫೆ.11ರ ಮಣಿಪಾಲ ಮ್ಯಾರಥಾನ್‌ನಲ್ಲಿ 15,000 ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ: ಡಾ.ಎಚ್.ಎಸ್. ಬಲ್ಲಾಳ್

ಕೀನ್ಯಾ, ಇಥಿಯೋಫಿಯಾ, ಅಮೆರಿಕ ಸೇರಿ 8 ದೇಶಗಳ ಸ್ಪರ್ಧಿಗಳು

ವಾರ್ತಾಭಾರತಿವಾರ್ತಾಭಾರತಿ7 Feb 2024 7:09 PM IST
share
ಫೆ.11ರ ಮಣಿಪಾಲ ಮ್ಯಾರಥಾನ್‌ನಲ್ಲಿ 15,000 ಅಥ್ಲೀಟ್‌ಗಳು ಭಾಗವಹಿಸಲಿದ್ದಾರೆ: ಡಾ.ಎಚ್.ಎಸ್. ಬಲ್ಲಾಳ್

ಉಡುಪಿ, ಫೆ.7: ದೇಶದ ಪ್ರತಿಷ್ಠಿತ ಮ್ಯಾರಥಾನ್‌ಗಳಲ್ಲಿ ಒಂದೆಂದು ಮಾನ್ಯತೆ ಪಡೆದಿರುವ ಮಣಿಪಾಲ ಮ್ಯಾರಥಾನ್‌ನ ಆರನೇ ಆವೃತ್ತಿ ಫೆ.11ರಂದು ಮಣಿಪಾಲದಲ್ಲಿ ನಡೆಯಲಿದ್ದು, ಈ ಬಾರಿ ವಿವಿಧ ವಿಭಾಗಗಳಲ್ಲಿ ದೇಶ- ವಿದೇಶಗಳ ಸುಮಾರು 15,000ದಷ್ಟು ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದು ಮಣಿಪಾಲ ಮಾಹೆಯ ಪ್ರೊ. ಚಾನ್ಸಲರ್ ಡಾ.ಎಚ್.ಎಸ್. ಬಲ್ಲಾಳ್ ತಿಳಿಸಿದ್ದಾರೆ.

ಮಣಿಪಾಲದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಅಮೆರಿಕ, ಜಪಾನ್, ಫ್ರಾನ್ಸ್, ಟರ್ಕಿ ಸೇರಿ ಒಟ್ಟು ಎಂಟು ದೇಶಗಳ 100ಕ್ಕೂ ಅಧಿಕ ಮಂದಿ ಮಣಿಪಾಲ ಮ್ಯಾರಥಾನ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಉಳಿದಂತೆ ಇಥಿಯೋಪಿಯಾ, ಕೀನ್ಯಾ, ಜರ್ಮನಿ, ಇಂಗ್ಲಂಡ್ ಹಾಗೂ ಆಸ್ಟ್ರೇಲಿಯಾಗಳಿಂದಲೂ ದೂರದ ಓಟಗಾರರು ಭಾಗವಹಿಸುವರು ಎಂದರು.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ) ಸಂಸ್ಥೆಯು ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್‌ನ ಸಹಭಾಗಿತ್ವದಲ್ಲಿ ಈ ಮ್ಯಾರಥಾನ್‌ನ್ನು ಆಯೋಜಿಸುತ್ತಿದ್ದು, ಇದು ದೇಶದ ಅತಿ ದೊಡ್ಡ ವಿದ್ಯಾರ್ಥಿ ಸಂಘಟಿತ ಮ್ಯಾರಥಾನ್ ಎನಿಸಿಕೊಳ್ಳಲಿದೆ ಎಂದರು.

200 ಮಂದಿ ಅಂಧ ಸ್ಪರ್ಧಿಗಳು: ಇದೇ ಮೊದಲ ಬಾರಿಗೆ ಬೆಂಗಳೂರಿನ ಸಮರ್ಥನಂ ಟ್ರಸ್ಟ್ ಮೂಲಕ ಸುಮಾರು 200 ಮಂದಿ ಅಂಧರು ಹಾಗೂ ಕರ್ನಾಟಕದ ವಿವಿಧೆಡೆಗಳಿಂದ ಸುಮಾರು 150 ಮಂದಿ ವಿಶೇಷ ಚೇತನರು ಮಣಿಪಾಲ ಮ್ಯಾರಥಾನ್‌ ನಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರಲ್ಲಿ ಒಬ್ಬರು ಪೂರ್ಣ ಮ್ಯಾರಥಾನ್ (42.19ಕಿ.ಮೀ.) ಸ್ಪರ್ಧೆಯಲ್ಲಿ ಪಾಲ್ಗೊಂಡರೆ, ಇಬ್ಬರು ಹಾಫ್ ಮ್ಯಾರಥಾನ್ (21.098ಕಿ.ಮೀ.)ನಲ್ಲಿ ಆರು ಮಂದಿ 10ಕಿ.ಮೀ. ಓಟದಲ್ಲಿ ಭಾಗವಹಿಸಲಿದ್ದಾರೆ. ಉಳಿದವರು ಇತರ ಸ್ಪರ್ಧೆಯಲ್ಲಿ ಸ್ಪರ್ಧಿಸುವರು ಎಂದು ವಿವರಿಸಿದರು.

ಸ್ಪರ್ಧಾ ವಿಭಾಗಗಳು: ಮಣಿಪಾಲ ಮ್ಯಾರಥಾನ್, ಅಂತಾರಾಷ್ಟ್ರೀಯ ಅಮೆಚೂರು ಅಥ್ಲೆಟಿಕ್ ಫೆಡರೇಶನ್ (ಐಎಎಎಫ್) ಮಾನ್ಯತೆಯೊಂದಿಗೆ ಅದರ ಮಾರ್ಗಸೂಚಿಯಂತೆ ನಡೆಯಲಿದೆ. ಮಣಿಪಾಲದಲ್ಲಿ ಪೂರ್ಣ ಮ್ಯಾರಥಾನ್ (42.195ಕಿ.ಮೀ.), ಹಾಫ್ ಮ್ಯಾರಥಾನ್ (21.098), 10ಕಿ.ಮೀ, 5ಕಿ.ಮೀ, 3ಕಿ.ಮೀ. ವಿಭಾಗಗಳಲ್ಲಿ ನಡೆಯಲಿದೆ. ಅಲ್ಲದೇ 3 ಕಿ.ಮೀ.ನ ಫನ್ ರೇಸ್ ಸಹ ನಡೆಯಲಿದೆ ಎಂದು ಡಾ.ಬಲ್ಲಾಳ್ ತಿಳಿಸಿದರು.

ಮೊದಲೆರಡು ವಿಭಾಗಗಳನ್ನು ಬಿಟ್ಟು ಉಳಿದ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ವಿವಿಧ ವಯೋವರ್ಗಗಳೂ ಸೇರಿದಂತೆ ವಿವಿಧ ಉಪವಿಭಾಗಗಳಿರುತ್ತವೆ. ಪೂರ್ಣ ಮ್ಯಾರಥಾನ್ ಫೆ.11ರ ರವಿವಾರ ಮುಂಜಾನೆ 5:00 ಗಂಟೆಗೆ ಮಣಿಪಾಲ ಗ್ರೀನ್ಸ್‌ನಿಂದ ಪ್ರಾರಂಭಗೊಳ್ಳಲಿದೆ. ಬಳಿಕ ಹಂತ ಹಂತವಾಗಿ ಉಳಿದ ಸ್ಪರ್ಧೆಗಳಿಗೆ ಹಸಿರು ನಿಶಾನೆ ತೋರಲಾಗುವುದು ಎಂದರು.

21 ಲಕ್ಷರೂ. ಬಹುಮಾನ ನಿಧಿ: ಮ್ಯಾರಥಾನ್‌ನಲ್ಲಿ ವಿವಿಧ ವಿಭಾಗಗಳ ವಿಜೇತರಿಗೆ ಒಟ್ಟು 21 ಲಕ್ಷರೂ. ಮೊತ್ತವನ್ನು ಬಹುಮಾನವಾಗಿ ನೀಡಲಾಗುತ್ತದೆ. ಪೂರ್ಣ ಮ್ಯಾರಥಾನ್‌ನ ಮೊದಲ ಮೂರು ಸ್ಥಾನಿಗಳಿಗೆ ಕ್ರಮವಾಗಿ 50ಸಾವಿರ, 30ಸಾವಿರ, 20 ಸಾವಿರ ಬಹುಮಾನವಿದ್ದರೆ, ಹಾಫ್ ಮ್ಯಾರಥಾನ್‌ಗೆ 30ಸಾವಿರ, 20ಸಾವಿರ, 10ಸಾವಿರ ರೂ.ನಗದು ಬಹುಮಾನವಿದೆ.

ಉಳಿದಂತೆ 10ಕಿ.ಮೀ. ವಿಜೇತರಿಗೆ 15,000ರೂ., 5ಕಿ.ಮೀ. ವಿಜೇತರಿಗೆ 7,000ರೂ., 3ಕಿ.ಮೀ. ವಿಜೇತರಿಗೆ 4,000ರೂ. ನಗದು ಬಹುಮಾನ ನೀಡಲಾಗುವುದು. ಈ ಬಾರಿ ಸ್ಪರ್ಧೆ ವಿಜೇತರನ್ನು ಘೋಷಿಸುತಿದ್ದಂತೆ ಬಹುಮಾನ ವಿತರಿಸಲಾಗುವುದು ಎಂದರು.

ಮಣಿಪಾಲ ಮ್ಯಾರಥಾನ್‌ನ ಆರನೇ ಆವೃತ್ತಿ ‘ಜೀವನ್ಮರಣ ಹೋರಾಟದಲ್ಲಿರುವ ರೋಗಿಗಳ ಉಪಶಾಮಕ ಆರೈಕೆ (ಹಾಸ್ಪೈಸ್ ಪೆಲಿಟೇವ್ ಕೇರ್)’ಯ ಕುರಿತು ಸಮಾಜದಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವ ಮಾನವೀಯ ಆಶಯದ ಧ್ಯೇಯವಾಕ್ಯದೊಂದಿಗೆ ನಡೆಯಲಿದೆ ಎಂದೂ ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾಹೆಯ ಉಪಕುಲಪತಿ ಲೆ.ಜ.(ಡಾ.)ಎಂ.ಡಿ. ವೆಂಕಟೇಶ್, ಸಹ ಉಪಕುಲಪತಿಗಳಾದ ಡಾ.ಶರತ್ ರಾವ್, ರಿಜಿಸ್ಟ್ರಾರ್ ಡಾ.ಗಿರಿಧರ್ ಕಿಣಿ, ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ.ಕೆಂಪರಾಜ್, ಡಾ.ಗಿರೀಶ್ ಮೆನನ್, ಡಾ.ನವೀನ್ ಸಾಲಿಸ್, ಡಾ.ಅವಿನಾಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X