ನ.16ರಿಂದ ಎಂಡೋಸಲ್ಫಾನ್ ಆರೋಗ್ಯ ತಪಾಸಣಾ ಶಿಬಿರ
ಮಂಗಳೂರು,ನ.15: ದ.ಕ. ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್ಗಳ ಸಹಯೋಗದೊಂದಿಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ನ.16ರಿಂದ ಆಯೋಜಿಸಲಾಗಿದೆ.
ನ.16ರಂದು ಪುತ್ತೂರು ತಾಲೂಕಿನ ಪಾಣಾಜೆ, ನ.19ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಮತ್ತು ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ನ.20ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ
Next Story