ಡಿ.20ರಂದು ಕಾಂಗ್ರೆಸ್ನಿಂದ ಪ್ರತಿಭಟನೆ
ಉಡುಪಿ, ಡಿ.19: ಸಂಸತ್ ಅಧಿವೇಶನದಲ್ಲಿ ಸಂವಿಧಾನದ ಬಗ್ಗೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಡಾ.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಸದನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅವಹೆಳನಕಾರಿಯಾಗಿ ಮಾತನಾಡಿದ ಸಿ.ಟಿ.ರವಿ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಡಿ.20ರಂದು ಬೆಳಗ್ಗೆ 11.30ಕ್ಕೆ ಉಡುಪಿ ಬ್ರಹ್ಮಗಿರಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story