ಅ.21ರಂದು ಪೊಲೀಸ್ ಹುತಾತ್ಮರ ದಿನಾಚರಣೆ
ಉಡುಪಿ, ಅ.18: ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಪೊಲೀಸ್ ಹುತಾತ್ಮರ ದಿನಾಚರಣೆ ಅ.21ರಂದು ಬೆಳಗ್ಗೆ 8ಗಂಟೆಗೆ ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕೇಂದ್ರ ಸ್ಥಾನದ ಚಂದು ಮೈದಾನದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಎಸ್. ಗಂಗಣ್ಣನವರ್, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ, ಜಿಪಂ ಸಿಇಓ ಪ್ರತೀಕ್ ಬಾಯಲ್, ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಮಿಥುನ್ ಎಚ್.ಎನ್., ನಕ್ಸಲ್ ನಿಗ್ರಹ ದಳದ ಪೊಲೀಸ್ ಅಧೀಕ್ಷಕ ಜಿತೇಂದ್ರ ಕುಮಾರ್ ದಯಾಮ ಭಾಗವಹಿಸಲಿರುವರು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story