ಸೆ.22ರಂದು ಉಡುಪಿ ಜಿಲ್ಲಾ ದಸರಾ ಕ್ರೀಡಾಕೂಟ ಉದ್ಘಾಟನೆ
ಉಡುಪಿ, ಸೆ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕು ಪಂಚಾಯತ್ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆ.22ರಂದು ಬೆಳಗ್ಗೆ 9:30ಕ್ಕೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣ ದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಕ್ರೀಡಾಕೂಟ ಉದ್ಘಾಟಿಸಲಿದ್ದು, ಶಾಸಕ ಯಶ್ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.
Next Story