24ನೇ ಸ್ವಚ್ಛ ಕಡಲತೀರ ಹಸಿರು ಕೋಡಿ ಅಭಿಯಾನ
ಕುಂದಾಪುರ, ಸೆ.26: ಕೋಡಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 24ನೇ ಸ್ವಚ್ಛ ಕಡಲತೀರ ಹಸಿರು ಕೋಡಿ ಅಭಿಯಾನವು ರಾಷ್ಟ್ರೀಯ ಸೇವಾ ಯೋಜನ ದಿನಾಚರಣೆಯೊಂದಿಗೆ ರವಿವಾರ ಜರಗಿತು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸಯ್ಯದ್ ಮುಹಮ್ಮದ್ ಬ್ಯಾರಿಯವರ ಆಶಯದಂತೆ ಸ್ವಚ್ಛತೆಯ ಕಡೆಗೆ ನಮ್ಮ ನಡಿಗೆ ಪರಿಸರ ಸ್ವಚ್ಛತೆಯ ಧನ್ಯತೆಯೊಂದಿಗೆ ಕಾರ್ಯಕ್ರಮವು ಸಾರ್ಥಕವಾಯಿತು.
ಅಭಿಯಾನದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ.ಅಬ್ದುಲ್ ರೆಹಮಾನ್, ವಿಶ್ವಸ್ಥ ಮಂಡಳಿ ಸದಸ್ಯರಾದ ಡಾ.ಆಸೀಫ್, ಸಂಯೋಜಕ ಪ್ರೊ. ಆಕಾಶ್, ಸಲಹಾ ಮಂಡಳಿ ಸದಸ್ಯರಾದ ಹಾಜಿ ಅಬುಷೇಕ್ ಸಾಹೇಬ್, ಮುಸ್ತರೀನ್, ಚಕ್ರೇಶ್ವರಿ ದೇವಳದ ಧರ್ಮದರ್ಶಿ ಗೋಪಾಲ ಪೂಜಾರಿ, ಬ್ಯಾರಿಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಸಿದ್ದಪ್ಪ ಕೆ.ಎಸ್., ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಶಮೀರ್, ಬ್ಯಾರೀಸ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ.ಸುರೇಶ್ ಶೆಟ್ಟಿ, ಬ್ಯಾರೀಸ್ ಕನ್ನಡ ಅನುದಾನಿತ ಪ್ರೌಢಶಾಲೆ ಮುಖ್ಯೋಪಾದ್ಯಾಯ ಜಯಶೀಲ ಶೆಟ್ಟಿ, ಬ್ಯಾರೀಸ್ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾದ್ಯಾಯಿನಿ ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.
ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಅಭಿಯಾನದಲ್ಲಿ ಪಾಲ್ಗೊಂಡ ವಿವಿಧ ವಿಭಾಗಗಳ ಮುಖ್ಯಸ್ಥರು, ಭೋದಕ ಭೋದಕೇತರ ವೃಂದ, ಶಾಲಾಭಿವೃದ್ಧಿ ಸಮೂಹ ಹಾಗೂ ವಿದ್ಯಾರ್ಥಿಗಳ ಕಾರ್ಯವನ್ನು ಶ್ಲಾಘಿಸಿದರು. ಕನ್ನಡ ಉಪನ್ಯಾಸಕ ಸಂದೀಪ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.