ನ.30ರಂದು ಕುಂದೇಶ್ವರ ದೀಪೋತ್ಸವ: ಮದ್ಯ ಮಾರಾಟ ನಿಷೇಧ
ಉಡುಪಿ, ನ.29: ನ.30ರಂದು ಕುಂದಾಪುರ ತಾಲೂಕಿನ ವಡೇರಹೋಬಳಿ ಗ್ರಾಮದ ಶ್ರೀ ಕುಂದೇಶ್ವರ ದೇವಸ್ಥಾನದ ದೀಪೋತ್ಸವದ ಪ್ರಯುಕ್ತ ಪುರ ಮೆರವಣಿಗೆ ಹಾಗೂ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1968ರ ನಿಯಮ 3ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ನ.30ರಂದು ಕುಂದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪುರಸಭೆ ವ್ಯಾಪ್ತಿ ಮತ್ತು ಹಂಗಳೂರು ಗ್ರಾಮದ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ಗಳ ಮದ್ಯ ಮಾರಾಟವನ್ನು ಬೆಳಗ್ಗೆ 6ರಿಂದ ರಾತ್ರಿ 12ರ ವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.
Next Story