ಅಪಘಾತ ಪ್ರಕರಣ: ಆರೋಪಿ ಕಾರು ಚಾಲಕನಿಗೆ ಜೈಲುಶಿಕ್ಷೆ
ಉಡುಪಿ, ಸೆ.2: ಮೂರು ವರ್ಷಗಳ ಹಿಂದೆ ಅಪಘಾತ ಎಸಗಿ ಸಾವಿಗೆ ಕಾರಣನಾದ ಆರೋಪಿ ಕಾರು ಚಾಲಕನಿಗೆ ಶಿಕ್ಷೆ ವಿಧಿಸಿ ಉಡುಪಿ ಒಂದನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ಸೆ.29ರಂದು ಆದೇಶಿಸಿದೆ.
ಕಟಪಾಡಿ ಸಮೀಪದ ಮಣಿಪುರ ಗ್ರಾಮದ ಮುಹಮ್ಮದ್ ಆಸೀಫ್(20) ಶಿಕ್ಷೆಗೆ ಗುರಿಯಾದ ಆರೋಪಿ. ಈತ 2020ರ ಸೆ.11ರಂದು ಅಂಬಲಪಾಡಿ ಜಂಕ್ಷನ್ ಕಡೆಯಿಂದ ಕರಾವಳಿ ಜಂಕ್ಷನ್ ಕಡೆಗೆ ತನ್ನ ಕಾರನ್ನು ದುಡುಕು ಹಾಗೂ ನಿರ್ಲಕ್ಷ್ಯತನ ದಿಂದ ಚಲಾಯಿಸಿ ಸೀತಾರಾಮ್ ಎಂಬವರಿಗೆ ಢಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದ್ದನು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸೀತಾರಾಮ್ ಮೃತಪಟ್ಟಿದ್ದರು. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿತ್ತು.
ಆಗಿನ ಉಡುಪಿ ವೃತ್ತ ನಿರೀಕ್ಷಕ ಮಂಜುನಾಥ್ ತನಿಖೆ ನಡೆಸಿ ದೋಷಾ ರೋಪಣಾ ಪಟ್ಟಿ ಸಲ್ಲಿಸಿದ್ದರು. ಉಡುಪಿ ಒಂದನೇ ಹೆಚ್ಚುವರಿ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಬಳಿಕ ಎರಡನೇ ಹೆಚ್ಚುವರಿ ಹಿರಿಯ ಸಿಜೆ ಮತ್ತು ಎಸಿಜೆಎಂ ನ್ಯಾಯಾಲಯಕ್ಕೆ ವರ್ಗಾವಣೆ ಗೊಂಡು ನ್ಯಾಯಾಧೀಶ ಸೋಮನಾಥ್ ಆರೋಪಿ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಿಸಿ ಆರೋಪಿ ಆಸೀಫ್‌ಗೆ 8 ತಿಂಗಳು ಸಾದಾ ಶಿಕ್ಷೆ ಹಾಗೂ 500ರೂ. ದಂಡ ವಿಧಿಸಿ ಆದೇಶ ನೀಡಿದರು. ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದಿಸಿದ್ದರು.