Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಅದಾನಿ ಸಿಎಸ್‍ಆರ್ ನಿಧಿ|...

ಅದಾನಿ ಸಿಎಸ್‍ಆರ್ ನಿಧಿ| ಪಡುಬಿದ್ರಿಯಲ್ಲಿ ಸ್ಯಾನಿಟರಿಪ್ಯಾಡ್, ನ್ಯಾಪ್ಕಿನ್ ವಿಲೇವಾರಿ ಸುಡುವಯಂತ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2024 9:55 PM IST
share
ಅದಾನಿ ಸಿಎಸ್‍ಆರ್ ನಿಧಿ| ಪಡುಬಿದ್ರಿಯಲ್ಲಿ ಸ್ಯಾನಿಟರಿಪ್ಯಾಡ್, ನ್ಯಾಪ್ಕಿನ್ ವಿಲೇವಾರಿ ಸುಡುವಯಂತ್ರ ಉದ್ಘಾಟನೆ

ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್‍ನ ಸಿಎಸ್‍ಆರ್ ಅನುದಾನದಡಿ ಪಡುಬಿದ್ರಿ ಗ್ರಾಮದಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕವನ್ನು ಬುಧವಾರ ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು.

ಅದಾನಿ ಫೌಂಡೇಷನ್‍ನ ಸಿಎಸ್‍ಆರ್ ಯೋಜನೆಗಳಲ್ಲಿ ಒಂದಾದ ಗ್ರಾಮೀಣ ಮೂಲಭೂತ ಸೌಕರ್ಯ ಯೋಜನೆಯಡಿ ಪಡುಬಿದ್ರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿಯು 2023-24ನೇ ವಾರ್ಷಿಕ ಸಾಲಿನಲ್ಲಿ ನೀಡಿದ ಕ್ರಿಯಾಯೋಜನೆ ಮೇರೆಗೆ ನಿರ್ಮಿಸಲಾಯಿತು. ಘಟಕವನ್ನು ಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕಿಶೋರ್ ಆಳ್ವ, ಸ್ಯಾನಿಟರಿ ಪ್ಯಾಡ್‍ಗಳನ್ನು ಸುಡುವ ಯಂತ್ರವನ್ನು ಸ್ಥಾಪಿಸಲು ಅದಾನಿ ಫೌಂಡೇಶನ್ ಈ ಯೋಜನೆಯನ್ನು ಅನುಷ್ಟಾನಕ್ಕೆ ತಂದಿದೆ. ಇದೊಂದು ಉತ್ತಮ ಯೋಜನೆ. ಈ ಘಟಕದಲ್ಲಿ ಘಂಟೆಗೆ ಸುಮಾರು 60 ಕಿಲೋ ಸ್ಯಾನಿಟರ್ ಪ್ಯಾಡ್‍ಗಳನ್ನು ದಹಿಸಬಹುದು. ಗ್ರಾಮೀಣ ಪ್ರದೇಶದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಇನ್ಸಿನರೇಟರ್ ಯಂತ್ರಗಳನ್ನು ಅಳವಡಿಸುವುದರಿಂದ ಉತ್ತಮ ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಉತ್ತೇಜಿ ಸಬಹುದು. ಬಳಸಿದ ಸ್ಯಾನಿಟರಿ ನ್ಯಾಪ್ಕಿನ್‍ಗಳನ್ನು ತೆರೆದ ಸ್ಥಳಗಳಲ್ಲಿ ಅಥವಾ ಅನೈರ್ಮಲ್ಯದ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಉಂಟಾಗುವ ಪರಿಸರ ಮತ್ತು ಆರೋಗ್ಯದ ಅಪಾಯಗಳನ್ನು ತಪ್ಪಿಸಲು ಈ ಘಟಕ ಸಹಾಯ ಮಾಡುತ್ತದೆ ಎಂದರು.

ವ್ಯಾಪಾರ ಕೇಂದ್ರವಾಗಿ ಪರಿವರ್ತನೆ: ಕಾಪು ತಾಲೂಕಿನ ಬೃಹತ್ ಗಾತ್ರದ ಪಾಂಚಾಯತ್ ಆಗಿರುವ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕೈಗಾರಿಕಾ ಪ್ರದೇಶಗಳು ಸ್ಥಾಪಿತವಾಗಿದ್ದು, ಒಂದು ಸುಂದರವಾದ ವ್ಯಾಪಾರ ಕೇಂದ್ರವಾಗಿ ಪರಿವರ್ತನೆಗೊಂಡಿದೆ. ಸುತ್ತಮುತ್ತಲ ಗ್ರಾಮಗಳು ಅಭಿವೃದ್ಧಿಗೊಂಡಿದೆ ಎಂದು ಆಳ್ವ ಹರ್ಷವ್ಯಕ್ತಪಡಿಸಿದರು.

ಗ್ಯಾಸ್ ವಿತರಣೆಗೆ ಮೊದಲ ಆದ್ಯತೆ: ಅದಾನಿ ಸಮೂಹವು ಪಡುಬಿದ್ರಿ ಗ್ರಾಮ ಪಂಚಾಯಿಯನ್ನು ತನ್ನ ಸಿಟಿ ಗ್ಯಾಸ್ ವಿತರಣೆ ಯೋಜೆನಯಡಿ ಪ್ರತಿಯೊಂದು ಮನೆಗೂ ಗ್ಯಾಸ್ ವಿತರಣೆಗೆ ಮೊದಲ ಆದ್ಯತೆಯಾಗಿ ಆಯ್ಕೆ ಮಾಡಿದೆ ಎಂದು ಆಳ್ವ ಅವರು ಈ ಸಂದರ್ಭದಲ್ಲಿ ತಿಳಿಸಿದರು.

ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಗ್ರಾಮಸ್ಥರ ಬೇಡಿಕೆ ಮೇರೆಗೆ ಒಂದು ಪಂಚಾಯತ್ ವ್ಯಾಪ್ತಿಯಲ್ಲಿ ಪರಿಸರ ದೃಷ್ಟಿಕೋನದಿಂದ ಸ್ಯಾನಿಟರಿ ಸುಡುವಯಂತ್ರವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿದ್ದು, ಅದಾನಿ ಸಂಸ್ಥೆಯ ಸಿಎಸ್‍ಆರ್ ಯೋಜನೆಯಿಂದ ಆ ಬೇಡಿಕೆ ಈಡೇಡಿರಿಸಿರುವುದು ಸಂತಸ ತಂದಿದೆ ಎಂದರು,

ಪಡುಬಿದ್ರಿ ಪಂಚಾಯಿತಿ ಉಪಾಧ್ಯಕ್ಷ ಹೇಮಚಂದ್ರ, ಸದಸ್ಯರುಗಳಾದ ನವೀನ್ ಎನ್. ಶೆಟ್ಟಿ, ಗಣೇಶ್ ಕೋಟ್ಯಾನ್, ಶೋಭಾ ಶೆಟ್ಟಿ, ಅಶೋಕ್ ಪೂಜಾರಿ, ರಮೀಝ್ ಹುಸೈನ್, ನಿಯಾಝ್, ಸುನಂದ, ವಿದ್ಯಾಶ್ರೀ, ಜ್ಯೋತಿ ಮೆನನ್, ಸಂದೇಶ್ ಶೆಟ್ಟಿ, ಶಾಫಿ, ಅದಾನಿ ಪವರ್ ಲಿಮಿಟೆಡ್‍ನ ಏಜಿಎಂ ರವಿ ಆರ್. ಜೇರೆ, ಅದಾನಿ ಫೌಂಡೇಷನ್‍ನ ಅನುದೀಪ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X