ಕನ್ನಡ ಧ್ವಜಕ್ಕೆ ಅಗೌರವ ಆರೋಪ: ಬೈಂದೂರು ತಹಶೀಲ್ದಾರ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಡಿಸಿಗೆ ಮನವಿ
ಉಡುಪಿ, ನ.2: ಕಾಟಾಚಾರಕ್ಕೆ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸಿ, ಕನ್ನಡ ಧ್ವ್ವಜಕ್ಕೆ ಅಗೌರವ ಮಾಡಿರುವ ಬೈಂದೂರು ತಹಶೀಲ್ದಾರ್ ವಿರುದ್ಧ ಕಾನೂನು ಕ್ರಮವನ್ನು ಜರುಗಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡರ ಬಣದ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಬೈಂದೂರು ತಾಲೂಕು ತಹಶೀಲ್ದಾರ್ ವಿರುದ್ಧ ಶೀಘ್ರ ಕಾನೂನು ಕ್ರಮವನ್ನು ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಹಶೀಲ್ದಾರ್ ವಿರುದ್ಧ ಉಡುಪಿ ಜಿಲ್ಲೆ ಮತ್ತು ತಾಲೂಕು ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕರವೇ ಎಚ್ಚರಿಕೆ ನೀಡಿದೆ. ಮನವಿಯನ್ನು ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್. ಸ್ವೀಕರಿಸಿದರು.
ಈ ಸಂಧರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸುಜಯ್ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷ ಕುಶಲ್ ಅಮೀನ್ ಬೆಂಗ್ರೆ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಜಯ ಪೂಜಾರಿ, ಜಿಲ್ಲಾ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ಸಂತೋಷ ಕುಲಾಲ್, ಜಿಲ್ಲಾ ಮಹಿಳಾ ಘಟಕದ ಉಪಾಧ್ಯಕ್ಷ ದೇವಕಿ ಬಾರಕೂರು, ಜಿಲ್ಲಾ ಮಹಿಳಾ ಘಟಕದ ಸಂಘಟನಾ ಕಾರ್ಯದರ್ಶಿ ಜ್ಯೋತಿ, ಜಿಲ್ಲಾ ಸಹ ಸಾಂಸ್ಕೃತಿಕ ಕಾರ್ಯದರ್ಶಿ ಪ್ರಮೋದ್ ಕುಲಾಲ್, ಜಿಲ್ಲಾ ಸಹ ಸಾಂಸ್ಕೃತಿಕ ಕಾರ್ಯದರ್ಶಿ ಜ್ಯೋತಿ ಆರ್., ಉಡುಪಿ ತಾಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ರಾಜ್ ಪೂಜಾರಿ, ಉಡುಪಿ ತಾಲೂಕು ಮಹಿಳಾ ಅಧ್ಯಕ್ಷ ಮಮತಾ ಮೊದಲಾದವರು ಉಪಸ್ಥಿತರಿದ್ದರು.